< 耶利米書 45 >
1 以下是耶肋米亞先知對乃黎雅的兒子巴路克說的話:他在猶大王約史雅的兒子約雅金第四年,由耶肋米亞口授,在卷冊上記錄了這些話:「
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,
“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ನಿನ್ನನ್ನು ಕುರಿತು ಹೀಗೆ ಹೇಳುತ್ತಾರೆ.
3 你曾說:我多麼可憐! 因為上主在我的愁苦上還加添痛苦;我呻吟憔悴,得不到安寧!
‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’
4 你應這樣對他說:上主這樣說:看! 我拆毀的,是我所建造的;我拔除的,是我所栽培的;我要打擊全地,
ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
5 你還有什麼大事可為自己請求;不必請求了。看,我給一切血肉招來災禍──上主的斷語──至於你,不論你到什麼地方去,我必賜你獲得性命,如獲勝利品。」
ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”