< 約伯記 11 >
೧ಆಗ ನಾಮಾಥ್ಯನಾದ ಚೋಫರನು ಹೀಗೆಂದನು,
2 難道喋喋不休,就不需要答覆﹖難道多嘴多舌的人,就證明有理﹖
೨“ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?
3 你的空談,豈能叫人緘默﹖你如此謾罵,難道無人使你羞愧﹖
೩ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ?
4 你說過:「我的品行是純潔的,我在你眼中是清白的。」
೪‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.
೫ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ!
6 將智慧的秘密,-即那難以理解的事-啟示給你,那麼你便知道,天主還忽略了你的一些罪過。
೬ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!
೭ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?
8 完美高於諸天,你能作什麼﹖深於陰府,你能知道什麼﹖ (Sheol )
೮ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? (Sheol )
೯ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಅಗಲವಾಗಿದೆ.
10 天主若經過,誰能扣留他﹖他若下了逮捕令,誰能阻擋他﹖
೧೦ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?
೧೧ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.
12 如此,愚蠢者纔可獲得智慧,野性驢駒纔能變為馴良。
೧೨ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.
೧೩ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.
14 你若將手中的罪惡除掉,不容不義留在你的帳幕內;
೧೪ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.
15 那麼你定能仰首無愧,一定站立穩定,一無所懼;
೧೫ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.
೧೬ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.
೧೭ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು.
18 因有希望,你纔感覺安全;因有保護,你纔坦然躺臥;
೧೮ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ.
19 你躺臥,無人敢來擾亂你,反而有多人來奉承你。
೧೯ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.
20 然而惡人的眼必要昏花,他們安身之所必全毀壞,他們的希望只在吐出最後的一口氣。
೨೦ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”