< 約伯記 12 >
೧ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು,
2 的確,只有你們是有知識的子民;那麼,你們一死,智慧也與你們一同喪亡!
೨“ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.
3 其實,我和你們有同樣的心理,我並不亞於你們! 誰不知道這些事﹖
೩ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ.
4 我這呼籲天主而蒙應允的人,卻被他的友人所嘲笑,無辜的義人卻成了笑柄。
೪ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.
5 幸運的人心想:遭難的人應受蔑視,失足的人應再予以打擊。
೫ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.
6 但是,強盜的帳幕竟能安全,觸怒天主的人,以勢力為神的人卻享平安。
೬ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.
7 請你詢問走獸,牠們也會開導你;詢問天上的飛鳥,牠們也會告訴你;
೭ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;
8 地上的爬蟲也會教訓你,海中的魚族也會給你說明。
೮ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು.
೯ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?
10 因為一切活物的生魂,一切血肉之人的靈魂,都握在他手中。
೧೦ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.
೧೧ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
೧೨ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.
13 但智慧和能力同在天主內,智慧與見識是天主所有。
೧೩ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ.
14 他若拆毀,人不能再建;他若拘禁,人不得開釋。
೧೪ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.
15 他若制水,水便乾涸;他若放水,水便沖毀大地。
೧೫ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.
16 力量與才能,為他所有;受騙者與騙人者,都屬於他。
೧೬ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.
೧೭ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.
18 他解除君王所繫的玉帶,將繩索捆在他們的腰間;
೧೮ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.
೧೯ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.
೨೦ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.
೨೧ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.
೨೨ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.
೨೩ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.
೨೪ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.
೨೫ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”