< 約伯記 21 >
2 你們且聽一聽我的話! 這也算是你們給我的安慰。
೨“ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ.
೩ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.
೪ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು?
೫ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ,
೬ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.
೭ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?
೮ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.
9 他們的住宅平安,無所畏懼,天主的棍杖也不加在他們身上。
೯ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು.
10 他們的公牛交尾,無不成功;母牛產子,決無流產。
೧೦ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು.
೧೧ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.
೧೨ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.
13 他們幸福地度過天年,平安地降入陰府。 (Sheol )
೧೩ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. (Sheol )
14 但他們曾向天主說:「離開我們! 我們不願知道你的道路。
೧೪ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
15 全能者是誰,竟叫我們事奉他﹖我們祈求他有什麼好處﹖」
೧೫ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.
16 看啊! 他們的幸福,豈不在他們掌握中﹖惡人的思想豈不離他很遠﹖
೧೬ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
17 惡人的燈有多少次熄滅過﹖災禍有多少次降在他們身上﹖天主何嘗因忿怒而消滅他們﹖
೧೭ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?
18 使他們好像被風吹的碎湝﹖好像被暴風捲去的糠秕﹖
೧೮ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?
19 難道天主要向他的兒子討罪債﹖其實應向他本人報復,叫他覺悟!
೧೯‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.
20 叫他親眼看見自己的毀滅,親自飲下全能者的義怒之杯。
೨೦ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.
21 他既逝去,他本人的歲月已絕,他的家庭對他還有什麼相干﹖
೨೧ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?
೨೨ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?
೨೩ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು.
೨೪ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು.
೨೫ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.
೨೬ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.
೨೭ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.
28 你們要問:「霸王的家在那裏﹖惡人住的帳幕在何處﹖」
೨೮‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.
29 你們怎麼不問過路的人﹖難道你們不承認他們的證據﹖
೨೯ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,
30 「惡人在毀滅之日不受害,在憤怒之日會得救。」
೩೦ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?
31 他的動作,誰敢當面指摘﹖他的行為,誰能報復﹖
೩೧ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?
೩೨ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು.
33 谷中的土壤,他感覺甘美;眾人都跟他而去,但在他前面的人,更不可勝數。
೩೩ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.
34 你們為何說空話來安慰我﹖你們的答話顯然只是欺詐!
೩೪ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.”