< 約伯記 28 >
೧“ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.
೨ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
3 人給黑暗制定了界限,探討幽暗陰晦的堅石,挖至地層深處。
೩ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.
4 在無人居住之處開鑿礦穴,上面過路的人,也想不到他們遠離人間,身懸半空,搖擺不定。
೪ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
೫ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.
೬ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.
೭ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.
೮ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.
೯ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.
೧೦ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು.
೧೧ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.
೧೨ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?
೧೩ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
14 深淵說:「她不在我這裏。」海洋說:「她不與我同域。」
೧೪ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.
15 她非精金所能購買,也不能稱量銀子作她的代價。
೧೫ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.
16 敖非爾金不能與她較量,寶石和碧玉也不能與她相比。
೧೬ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.
17 黃金與琉璃不能與她同列,純金的器皿也不能與她交換。
೧೭ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?
೧೮ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
19 雇士的黃玉不足與她相比,純金也不能與她較量。
೧೯ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.
೨೦ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
೨೧ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
22 毀滅」與「死亡」都說:「我們只風聞過她的聲望。」
೨೨ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.
೨೩ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
೨೪ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.
೨೫ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.
೨೬ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,
೨೭ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.
28 然後對人說:「看,敬畏上主,就是智慧;遠離邪惡,就是明智。」
೨೮ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.