< 約伯記 34 >
೧ಆಗ ಎಲೀಹು ಮತ್ತೆ ಇಂತೆಂದನು,
2 你們有智慧的人,請聽我言;你們明白人,請側耳聽我。
೨“ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ!
೩ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
4 讓我們來檢討一下誰為正義,讓我們看看何者為善。
೪ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.
5 約伯說過:「我是無罪的,但我的理,卻為天主奪去。
೫ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.
6 我雖無罪無辜,卻成了說謊者;我雖未行不義,卻受了不可醫治的創傷。」
೬ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ.
೭ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.
೮ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ.
9 他豈不是說過:「盡心悅樂天主,為人能有什麼好處﹖」
೯‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.
10 為此,你們心地明白的人,請聽我說,天主決不行惡,全能者決無不義!
೧೦ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!
೧೧ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.
೧೨ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ.
೧೩ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?
೧೪ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,
೧೫ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.
೧೬ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!
17 憎恨正義的,豈能掌權﹖而你竟敢定那至公義者的罪﹖
೧೭ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?
೧೮ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?
19 他對權貴不顧情面,亦不重富輕貧,因為都是他一手造成的。
೧೯ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
20 他們猝然在半夜死去,貴族能立即氣絕逝世;他剷除權貴者,無須人手。
೨೦ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.
೨೧ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.
೨೨ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.
೨೩ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.
24 他粉碎權勢者,無須審察,即刻能派定別人代替他們。
೨೪ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.
25 他原知道他們的行為,一夜之間將他們推翻消滅。
೨೫ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.
೨೬ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು.
೨೭ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.
28 致使窮人的哀號上達於他,使他聽到了受苦者的哀求。
೨೮ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.
29 他若安息,誰敢騷擾﹖他若掩面,誰敢窺視﹖他對國對人都予以監視,
೨೯ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.
೩೦ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ.
31 如果惡人向天主說:「我受了欺騙,以後不再作惡。
೩೧ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,
32 我所看不透的,求你指教我;我若以前作了孽,不敢再做了。」
೩೨ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?
33 他施行報應,豈應隨你的心意﹖或者你能拒絕不受嗎﹖決定的是你,而不是我! 你若知道,儘管說罷!
೩೩ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.
34 但是心地聰明,具有智慧,且聽我說話的人,必要對我說:「
೩೪ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ,
೩೫‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’
36 為此,約伯還要受徹底的究察,因為他的答覆好似出自惡人之口,
೩೬ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ.
37 因為他在罪上又加反叛,當著我們磨拳擦掌,講出許多相反天主的話。
೩೭ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು.