< 約伯記 41 >
೧ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ?
2 你豈能以鼻圈穿過牠的鼻子,以鉤子刺透牠的腮骨﹖
೨ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?
೩ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?
೪ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ?
5 你豈能玩弄牠像玩弄小鳥,將牠縛著作你女兒的玩物﹖
೫ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ?
೬ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ?
೭ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ?
8 將你的掌撫在牠身上罷! 若你想到惡鬥,決不敢再撫。
೮ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ.
೯ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.
10 沒有一個勇敢的人敢觸犯牠,有誰還敢站立在牠前面呢﹖
೧೦ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?
೧೧ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.
12 論牠的四體百肢,我不能緘默;論牠的力量,我要說:沒有可與牠相比的。
೧೨ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.
೧೩ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?
೧೪ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ.
೧೫ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.
೧೬ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ.
೧೭ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ.
೧೮ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.
೧೯ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಕಿಡಿಗಳು ಹಾರುವವು.
೨೦ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು.
೨೧ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.
22 牠的力量集中在牠的頸上,在牠面前,沒有不恐怖的。
೨೨ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು.
೨೩ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.
೨೪ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.
೨೫ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.
೨೬ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ.
೨೭ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು.
೨೮ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.
೨೯ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು.
೩೦ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು.
೩೧ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು.
೩೨ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.
೩೩ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ, ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ.
೩೪ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು.