< 約拿書 1 >
೧ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,
2 「你起身往尼尼微大城去,向他們宣佈:他們的邪惡已達到我前」。
೨“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
3 約納卻起身,想躲開上主的面,逃到塔爾史士去:遂下到約培,找到一隻要開往塔爾史士的船,繳了船費,上了船,同他們往塔爾史士去,好躲開上主的面。
೩ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.
4 但是上主卻使海上起了大風,海中風浪大作,那隻船眼看就要被擊破。
೪ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.
5 水手們都驚慌起來,每人呼求自己的神,並將船上的貨物拋在海裏,為減輕載重。約納卻下到船艙,躺下沈睡了。
೫ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
6 船長走到他跟前,向他說:「怎麼,你還在睡覺﹖起來! 呼求你的神吧! 你的神也許會眷念我們,使我們不致喪亡」。
೬ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.
7 他們彼此說:「來,我們抽籤,以便知道,我們遇到這場災禍,是因誰的緣故」。他們便抽籤,約納竟抽中了。
೭ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.
8 他們向他說:「請告訴我們:我們遇到這場災禍,是因什麼緣故﹖你是幹什麼的﹖從那裏來﹖你是什麼地方的人﹖屬於那一個民族﹖」
೮ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು
9 他回答他們說:「我是個希伯來人,我敬畏的,是那創造海洋和陸地的上天的上主天主。」
೯ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,
10 那些人都很害怕,就對他說:「怎麼你做了這事﹖」人們都知道,他是從天主面前逃跑的,因為他已告訴了他們。
೧೦ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.
11 他們又向他說:「我們該怎樣處置你,才能使海為我們而平靜﹖」因為海越來越洶湧了。
೧೧ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು.
12 他對他們說:「你們舉起我,將我拋在海裏,海就會為你們平靜下來,因為我知道,這場大風暴,臨到你們身上,只是因了我的緣故。」
೧೨ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.
13 眾人雖然盡力搖櫓,想回到海岸,卻是不能,因為海上風暴,越來越洶湧。
೧೩ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
14 所以他們便呼求上主說:「上主! 求你不要因這一個人的性命,使我們全部喪亡;不要將無辜者的血,歸在我們身上,因為你是上主,就按你的意願作吧! 」
೧೪ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.
೧೫ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು.
16 眾人都極其敬畏上主,遂向上主祭獻,許下誓願。
೧೬ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
17 上主安排了一條大魚,吞了約納;約納在魚腹裏,三天三夜。
೧೭ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.