< 耶利米哀歌 4 >
1 怎麼! 黃金竟暗淡無光,純金竟變了色! 聖所的石頭都散亂在街頭!
೧ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.
2 熙雍的子女,原比純金尊貴,怎麼現在竟被看作瓦器,被看作陶人的出品!
೨ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.
3 豺狼尚且露出乳房,哺養自己的幼兒;我的女兒──人民,竟然殘暴不仁,好似曠野中的鴕鳥!
೩ನರಿಗಳು ಕೂಡಾ ಮರಿಗಳಿಗೆ ಮೊಲೆಗೊಟ್ಟು ಸಾಕುತ್ತವೆ; ಆದರೆ ನನ್ನ ಜನವೆಂಬಾಕೆಯೋ ಕಾಡಿನ ಉಷ್ಟ್ರಪಕ್ಷಿಯಷ್ಟು ಕ್ರೂರಳಾಗಿದ್ದಾಳೆ.
4 嬰兒的舌頭,乾渴得緊貼上顎;幼童飢餓求食,卻無人分給他們。
೪ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.
5 昔日飽享山珍海味,今日竟餓死街頭;一向衣飾華麗,而今卻滿身糞土。
೫ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.
6 我的女兒──人民的罪罰,比索多瑪的還重,索多瑪頃刻間傾覆了,並非假手於人。
೬ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
7 昔日,她的少年,比雪還潔白,比乳還皎潔;他們的皮膚,比珊瑚還紅潤,他們的身體好似一片青玉。
೭ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.
8 而今,他們的容貌,比炭還黑,在街上已辨認不出,皮包骨頭,枯瘦如柴;
೮ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.
9 死於刀下的,比死於饑餓的,即因缺乏田產,日漸衰弱而死的,更為幸運。
೯ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.
10 柔情的婦女竟要親手烹食自己的子女;在我的女兒──人民遭受浩劫時,子女竟成了母親的食物。
೧೦ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ; ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.
11 上主大發震怒,傾洩了他的怒火,火燒熙雍,焚毀了他的基礎。
೧೧ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.
12 地上的君王和世上的居民,誰也不相信:仇敵能進入耶路撒冷的城門。
೧೨ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.
13 這是由於她先知們的罪惡,和她司祭們的過犯:他們在城中心,傾流了義人的血;
೧೩ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
14 他們身染血污,像瞎子一樣,徘徊街頭,叫人不能觸摸他們的衣服。「
೧೪ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.
15 不潔! 退避! 」人們喊說:「退避! 不可接近! 」如果他們逃亡,漂流異邦,異邦人又說:「不要讓他們留居此地。」
೧೫ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.
16 上主的怒容驅散他們,不再垂顧他們;人也不再尊敬司祭,不再敬重長老。
೧೬ಯೆಹೋವನ ಉಗ್ರದೃಷ್ಟಿಯು ಅವರನ್ನು ಚದುರಿಸಿದೆ; ಆತನು ಇನ್ನು ಅವರ ಮೇಲೆ ಒಲವು ತೋರಿಸುವುದಿಲ್ಲ. ಅವರು ಯಾಜಕರಾದರೇನು, ಅವರಿಗೆ ಮರ್ಯಾದೆ ತಪ್ಪಿದೆ; ವೃದ್ಧರಾದರೇನು, ಯಾರೂ ಅವರನ್ನು ಕರುಣಿಸರು.
17 我們還在望眼欲穿,幻想著我們的救援;我們仍在瞭望台上,期望著那不能施救的異邦。
೧೭ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಬುರುಜುಗಳಲ್ಲಿ ಕಾದುಕೊಂಡಿದ್ದೇವಲ್ಲಾ.
18 敵人正在追蹤我們的足跡,阻止我們在街上行走;我們的結局已近,我們的日子已滿;的確,我們的終期已到。
೧೮ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
19 追捕我們的人,比凌空的飛鳥還要快速;他們在山上搜索我們,在曠野裏窺伺我們。
೧೯ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.
20 連我們的氣息──上主的受傅者,也落在他們的陷阱中:我們原希望在他的福蔭下,生活在異邦人中。
೨೦ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.
21 住在胡茲地的厄東女郎! 你歡欣喜樂罷! 苦爵也要輪到你喝,你將要醉倒,而赤身裸體。
೨೧ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
22 熙雍女郎! 你的罪債已經償還,上主不再使你流徙;厄東女郎! 他必要懲罰你的過犯,揭露你的罪惡。
೨೨ಚೀಯೋನೆಂಬ ಕನ್ಯೆಯೇ, ನಿನ್ನ ದೋಷಫಲವೆಲ್ಲಾ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು. ಎದೋಮೆಂಬ ಕನ್ಯೆಯೇ, ನಿನ್ನ ದೋಷದ ನಿಮಿತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.