< 腓立比書 2 >

1 所以,如果你們在基督內獲得了鼓勵,愛的勸勉,聖神的交往,哀憐和同情,
ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,
2 就應意見一致,同心合意,思念同樣的事,以滿全我的喜樂。
ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.
3 不論做什麼,不從私見,也不求虛榮,只存心謙下,彼此此該想自己不如人;
ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
4 各人不可只顧自己的事,也該顧別人的事。
ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
5 你們該懷有基督耶穌所懷有的心情:
ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
6 他雖具有天主的形體,並沒有以自己與天主同等,為應當把持不捨的,
ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
7 卻使自己空虛,取了奴僕的形體,與人相似,形狀也一見如人;
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
8 祂貶抑自己,聽命至死,且死在十字架上。
ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
9 為此,天主極其舉揚祂,賜給了祂一個名字,超越其它所有的名字,
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
10 致使上天、地下和一切的一切,一聽到耶穌的名字,無不屈膝叩拜;
೧೦ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,
11 一切唇舌無不明認耶穌基督是主,以光榮大主聖父。
೧೧ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
12 為此,我可愛的,就如常常聽了命,不但我與你們同在的時候,就是如今不在時候,你們更應該聽命。你們要懷著恐懼戰憟,努力成就你們得救的事,
೧೨ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
13 因為是天主在你們內工作,使你們願意,並使你們力行,為成就祂的善意。
೧೩ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.
14 你們做一切事,總不可抱怨,也不可爭論,
೧೪ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.
15 好使你們成為無可指謫和純潔的,在乖僻敗壞的世代中,做天主無瑕的子女;在世人中你們應放光明,有如字宙間明星,
೧೫ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.
16 將生命的話顯耀出來,使我到基督的日子,有可自誇的,那我就沒有白跑,也沒有徒勞。
೧೬ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
17 既使我應在你們信德的祭祀和供獻上奠我的血,我也喜歡, 且與你們眾位一同喜歡;
೧೭ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.
18 同樣,你們也該喜歡,也該與我一同喜歡。
೧೮ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ.
19 我在主耶穌內希望不久打發弟茂德到那裏去,好叫我知道你們的事而放心。
೧೯ಆದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು.
20 實在,我沒有一個像他那樣誠心關照你們的人,
೨೦ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
21 因為其他的人都謀求自己的事,而不謀求基督耶穌的事。
೨೧ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ.
22 至於他,你們知道他所受過的考驗,他對我如同兒子對待父親一樣,與我一同從事了福音皂工作。
೨೨ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.
23 所以,我希望,幾時我一看出我的事怎樣了結,就立即打發他去;
೨೩ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ.
24 並且在主內我自信,我自己也快去。
೨೪ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
25 再者,我以為必須把我的弟兄、同事和戰友,即你們派來為供給我急需的使者,厄帕洛狄托給你們打發回去,
೨೫ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.
26 因為他常想念你們眾人,又因你們聽說他病了,他更為心焦。
೨೬ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.
27 實在,他曾病得幾乎要死;但天主可憐了他,不但他,也可憐了我,免得我愁上加愁。
೨೭ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.
28 那麼,我儘速打發他回去,好叫你們看見他感到喜樂,而我也減少憂苦。
೨೮ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ.
29 所以你們應該在主內滿心喜歡接待他;像這樣的人,你們應當尊敬,
೨೯ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.
30 因為他為了基督工作,曾冒性命的危險,接近了死亡,為彌你們未能事奉我的虧缺。
೩೦

< 腓立比書 2 >