< 箴言 27 >
೧ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.
2 只應讓人讚美你,你不應開口自誇;讚你的該是他人,不該是你的唇舌。
೨ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ, ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.
೩ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.
4 憤怒固然殘酷,暴怒更是猛烈;可是面對妒恨,有誰能夠抵受﹖
೪ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?
೫ಕಾರ್ಯದಿಂದ ಹೊರಪಡದ ಪ್ರೀತಿಗಿಂತಲೂ, ಬಹಿರಂಗವಾದ ಗದರಿಕೆಯು ಲೇಸು.
೬ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.
7 人若吃飽了,蜂蜜也厭惡;若肚子饑餓,苦物也甘甜。
೭ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.
೮ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.
9 香油和香料,能暢快人心;朋友的勸勉,能撫慰人靈。
೯ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.
10 你的知心朋友,你父親的至交,你切不可離棄;在你憂患的時日,不要進兄弟的家。靠近的鄰舍,勝於遠地的兄弟。
೧೦ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
11 我兒,作個智慧人,使我心高興,好叫我回答笑罵我的人。
೧೧ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.
12 精明人遇見災禍,即行隱避;無知者反向前走,自招損害。
೧೨ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
13 誰為外方人作保,拿出他的衣服;誰為異族人作保,以他本人作質。
೧೩ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
೧೪ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
15 豪雨的時日,滴漏不已:好吵的女人,也是如此;
೧೫ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
16 誰願意攔阻她,無異攔阻狂風,又好似右手抓油。
೧೬ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.
೧೭ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
18 看守無花果樹的,必食其果;護守自己主人的,必受器重。
೧೮ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.
೧೯ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.
20 陰府和冥域,總填不滿;世人的眼睛,從不滿足。 (Sheol )
೨೦ಪಾತಾಳಕ್ಕೂ, ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ, ಹಾಗೆಯೇ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ. (Sheol )
೨೧ಪುಟಕುಲುಮೆಗಳಿಂದ ಬೆಳ್ಳಿಬಂಗಾರಗಳಿಗೆ ಶೋಧನೆಯು ಹೇಗೋ, ಹೊಗಳಿಕೆಯಿಂದ ಮನುಷ್ಯನಿಗೆ ಶೋಧನೆಯು ಹಾಗೆಯೇ.
22 你盡可在臼中將愚人舂碎,但他的昏愚卻永不能剷除。
೨೨ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.
23 對你羊群的情況,應加注意;對你的家畜,應常留心照料;
೨೩ನಿನ್ನ ಹಿಂಡುಗಳ ಸ್ಥಿತಿಯನ್ನು ಚೆನ್ನಾಗಿ ತಿಳಿದುಕೊಂಡಿರು, ನಿನ್ನ ಮಂದೆಗಳ ಮೇಲೆ ಮನಸ್ಸಿಡು.
೨೪ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?
25 割去了乾草,青草又叢生;山間的野草,也收集起來;
೨೫ಹುಲ್ಲನ್ನು ಕೊಯ್ದು ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವುದು, ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.
೨೬ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.
೨೭ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.