< 箴言 28 >
1 惡人無人追蹤,仍然竄逃;義人安然自得,有如雄獅。
೧ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
2 由於國家的罪,領袖時有更迭;惟賴明哲之士,邦國方能久存。
೨ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.
೩ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
೪ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
೫ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
೬ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
7 遵守法律的,是智慧之子;交結蕩子的,是取辱己父。
೭ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
೮ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
9 對於法律,人若充耳不聞,他的祈禱,也為上主所惡。
೯ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
10 勾引正直的人走上邪路的,必落在自己所掘的坑內;但正直的人仍能繼承幸福。
೧೦ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
11 富貴的人,自認為有智慧,聰明的窮人一眼即看穿。
೧೧ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
೧೨ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
13 文過飾非的,必不會順利;認錯悔改的,將蒙受憐憫。
೧೩ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
14 常戒慎的人,必蒙祝福;心硬如鐵者,必遭災禍。
೧೪ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
೧೫ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
16 無知的昏君,必橫行霸道;憎恨貪婪的,將延年益壽。
೧೬ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
೧೭ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18 行走正路的,必安然無恙;愛走曲徑的,必墮入陷阱。
೧೮ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19 自耕其地的,必常得飽食;追求虛幻的,必飽嘗貧苦。
೧೯ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20 忠誠篤實的人,將滿渥福祉;急於致富的人,將難免無過。
೨೦ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21 顧及人的情面,原非一件好事;但為一片麵包,人卻陷身不義。
೨೧ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
22 眼睛貪婪的人,匆匆急於致富;豈知貧乏窮困,即將臨他身上!
೨೨ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
೨೩ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.
24 向自己父母行竊,卻說「這並不是罪,」與強盜是同路人。
೨೪ದೋಷವಲ್ಲವೆಂದು ತಾಯಿತಂದೆಗಳ ಧನವನ್ನು ಕದಿಯುವವನು, ಕೆಡುಕನಿಗೆ ಜೊತೆಗಾರನು.
25 貪得無厭的人,必引起爭端;信賴上主的人,必心安理得。
೨೫ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.
26 自恃聰明的,實是糊塗人;行事智慧的,必安全無恙。
೨೬ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27 樂施濟貧的,決不會匱乏;視若無睹的,必飽受咒罵。
೨೭ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
೨೮ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು, ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.