< 箴言 6 >
೧ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,
2 你如果為你口中說的話所連累,為你口中的言詞所束縛,
೨ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.
3 那麼,我兒,你既然已陷在你友人的手中,你就該逃脫,該這樣做:火速前去,央求你的友人,
೩ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು, ನಡೆ, ತ್ವರೆಪಡು, ಆ ನೆರೆಯವನನ್ನು ಅಂಗಲಾಚಿ ಬೇಡಿಕೋ,
೪ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನ ರೆಪ್ಪೆಗಳನ್ನು ಮುಚ್ಚಬೇಡ;
5 應急速解救自己,如羚羊掙脫羅網,飛鳥逃脫獵人的圈套。
೫ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.
6 懶漢,你去看看螞蟻,觀察牠的作風,便可得些智識:
೬ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.
೭ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,
೮ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.
೯ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?
೧೦“ಇನ್ನು ಸ್ವಲ್ಪ ನಿದ್ದೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ” ಅಂದುಕೊಳ್ಳುವಿಯಾ?
11 這樣貧窮就要如同竊賊,困乏也要如同武士,向你侵襲。
೧೧ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
೧೨ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,
೧೩ಕಣ್ಣನ್ನು ಮಿಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.
೧೪ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.
15 為此,他的喪亡必突然來臨,霎時間全被毀滅,無法挽救。
೧೫ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
16 上主憎恨的事,共有六件,連他心裏最厭惡的事,共有七件:
೧೬ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
೧೭ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,
೧೮ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತ್ವರೆಪಡುವ ಕಾಲು,
೧೯ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.
20 我兒,應堅守你父親的命令,不要放棄你母親的教訓;
೨೦ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
೨೧ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.
22 她們在你行路時引領你,在你躺臥時看護你;在你醒來時與你交談。
೨೨ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.
23 因為父命是盞燈,母教是光明,嚴格的勸告是生命的道路,
೨೩ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
೨೪ಅದು ಕೆಟ್ಟ ಸ್ತ್ರೀಯಿಂದಲೂ, ವೇಶ್ಯೆಯ ಸಿಹಿನುಡಿಯಿಂದಲೂ ನಿನ್ನನ್ನು ರಕ್ಷಿಸತಕ್ಕದ್ದಾಗಿದೆ.
25 不讓你的心貪戀她的美色,不讓她的秋波迷惑你,
೨೫ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.
26 因為娼妓所求的只是一塊餅,有夫之婦卻獵取寶貴的生命。
೨೬ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
೨೭ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ?
೨೮ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?
29 與他人妻子通姦的人就是這樣:凡接近她的,必難免受罰。
೨೯ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
೩೦ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
31 但若被擒獲了,他仍須七倍償還,交出家中所有的財物。
೩೧ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.
32 與婦人通姦的人,實屬愚眛,他這樣做,卻是毀滅自己。
೩೨ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
33 他必遭受可恥的打擊,並且他的恥辱,永不得拭去,
೩೩ಅವನಿಗೆ ಗಾಯವೂ, ಅವಮಾನವೂ ಆಗುವವು, ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.
34 因為妒火能激怒男人,使他在報復時,決不留情;
೩೪ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.
35 任何的賠償,他都不理睬;即便你多送禮品,他也不肯罷休。
೩೫ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.