< 詩篇 111 >

1 阿肋路亞。在義人的集會和團聚中,我要全心讚頌上主。
ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.
2 上主的化工確實偉大,凡喜愛祂的必須究察。
ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.
3 上主的作為輝煌,上主的正義常存。
ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.
4 上主的奇蹟不可遺忘;上主實在是慈愛而溫良。
ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.
5 上主賜給敬愛祂的人食物,上主永遠懷念自己的盟約。
ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.
6 祂將偉業的異能啟示給選民,把外邦人的產業賞賜給他們。
ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ದೇವರು ಶಕ್ತಿಯ ಕ್ರಿಯೆಗಳನ್ನು ತಮ್ಮ ಜನರಿಗೆ ತಿಳಿಸಿದ್ದಾರೆ.
7 上主所行的是真誠正義;上主的一切規誡堅定不移。
ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.
8 為萬世萬代永遠立定,全是基於真理和公正。
ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ; ಅವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಒಳಗೊಂಡಿರುತ್ತದೆ.
9 祂速來救贖祂的百姓,永遠立定了祂的約盟;祂的名是神聖而可敬。
ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.
10 敬愛上主,是智慧的開始:實行敬愛的人,算有智慧;他的榮譽,必定存留永世。
ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.

< 詩篇 111 >