< 詩篇 113 >
1 阿肋路亞!上主的僕人,請一齊讚頌,請一齊讚頌上主聖名!
೧ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.
೨ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.
೩ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.
೪ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
5 誰能相似上主我們的天主?祂坐在蒼天之上的最高處。
೫ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
೬ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
7 上主從塵埃裏提拔弱小的人;上主由糞土中舉揚窮苦的人,
೭ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
೮ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
9 使那不孕的婦女坐鎮家中,成為多子的母親快樂無窮。
೯ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!