< 詩篇 113 >
1 阿肋路亞!上主的僕人,請一齊讚頌,請一齊讚頌上主聖名!
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.
ಇಂದಿನಿಂದ ಯುಗಯುಗಕ್ಕೂ ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ.
ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು.
ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.
5 誰能相似上主我們的天主?祂坐在蒼天之上的最高處。
ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.
ಆಕಾಶವನ್ನೂ, ಭೂಮಿಯನ್ನೂ ತಗ್ಗಿಸಿಕೊಂಡು ನೋಡುತ್ತಾರೆ.
7 上主從塵埃裏提拔弱小的人;上主由糞土中舉揚窮苦的人,
ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.
ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.
9 使那不孕的婦女坐鎮家中,成為多子的母親快樂無窮。
ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. ಯೆಹೋವ ದೇವರನ್ನು ಸ್ತುತಿಸಿರಿ.