< 詩篇 2 >
1 【默西亞必勝】萬邦為什麼囂張,眾民為什麼妄想?
೧ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
2 世上列民群集一堂,諸侯畢至聚首相商,反抗上主,反抗他的受傅者:
೨ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
೩“ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
೪ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
೫ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
೬“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
7 我要傳報上主的聖旨:上主對我說:你是我的兒子,我今日生了你。
೭ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
8 你向我請求,我必將萬民賜你作產業,我必將八極賜你作領地。
೮ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
೯ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
10 眾王!你們現在應當自覺,大地掌權者!你們應受教:
೧೦ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
11 應以敬愛之情事奉上主,戰戰兢兢向祂跪拜叩首;
೧೧ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
12 以免祂發怒將你們滅於中途,因為祂的怒火發怒非常快速。凡一切投奔祂的人真是有福。
೧೨ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.