< 詩篇 20 >

1 【求賜君王勝利】 達味詩歌,交與樂官。 願上主在憂患之日,俯允你,願雅各伯的天主,保祐你!
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.
2 願祂從聖所救護你,願祂由熙雍扶助你!
ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.
3 願祂追念你的一切祭獻,願祂悅納你的全燔祭獻!
ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.
4 願祂滿全你心中的志願,願祂玉成你的一切籌算!
ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.
5 我們要因你的勝利歡舞,奉我們天主的名豎立旗鼓:我的一切請求,願上主成就!
ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.
6 我深信上主必賞祂的受傅者獲勝,以無敵右手救拯,從神聖的高天俯聽。
ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.
7 他們或仗恃戰車,他們或仗恃戢馬;我們只以上主,我們天主的名自誇。
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.
8 他們必將倒地喪命。我們卻將挺身立定。
ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.
9 上主,求你賜給君王獲勝,我們求您時,請您俯允我們。
ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! ನಾವು ಕರೆಯುವಾಗ ನಮಗೆ ಉತ್ತರಕೊಡಿರಿ!

< 詩篇 20 >