< 詩篇 28 >
1 上主,我在向你呼號;我的磐石,不要置若罔聞;你若對我沉默不語,我便無異向陰府裏沉淪。
೧ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2 當我朝著你的聖所向你呼號,高舉我手時,請俯聽我的哀禱!
೨ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
3 求你不要把我同敗類一起剿絕,不要把我同作惡的人一同消滅:他們與人談平安,但心中卻十分陰險。
೩ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4 願你按他們的作為,照他們行為的邪惡,報復他們;按他們手中的事業,給他們應得的報應,處罰他們!
೪ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
5 他們不關心上主的工程和祂手中所行,但願上主粉碎他們,不要再使他們復興!
೫ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
೬ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.
7 上主是我的力量,我的護佑,我對祂全心依賴,必獲扶助;為此我滿心歡喜,讚頌歌舞。
೭ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
೮ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9 求你拯救你的人民,祝福你的百姓,求你牧養他們,提攜他們直至永恒。
೯ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.