< 詩篇 3 >

1 【困苦人的祈禱】 達味詩歌,作於逃避其子阿貝沙隆時。 上主,迫害我的人,不可勝數! 攻擊我的人,成群結隊!
ದಾವೀದನ ಕೀರ್ತನೆ. ಅವನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ್ದು. ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!
2 很多人論及我說:天主絕不拯救他!
“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.
3 但是你,上主,是圍護我的盾牌,是我的榮耀,常使我首昂頭抬。
ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.
4 我一向上主大聲呼號,祂便從聖山上俯聽我。
ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.
5 我躺下安睡,我又醒了,因為上主常扶持著我。
ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.
6 雖有千萬人,向我圍攻,我一絲一毫也不驚恐。
ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.
7 上主,請你興起奮發;我的天主,求你救拔,因為你擊破了我仇敵的腮頰,你打破眾惡人的門牙。
ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.
8 救援之恩完全屬於上主;願你的百姓受你的祝福!
ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.

< 詩篇 3 >