< 詩篇 58 >
1 達味金詩,交與樂官。調寄「莫要毀壞」。 判官們!你們是否真正出言公平?世人們!你們是否照理審斷案情?
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಅಲ್ತಷ್ಖೇತೆಂಬ ರಾಗವನ್ನು ಆಧರಿಸಿದೆ. ದಾವೀದನ ಮಿಕ್ಟಮ್ ಹಾಡಿನ ಸಂಯೋಜನೆ. ದಾವೀದನ ಕೀರ್ತನೆ. ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?
2 可惜你們一心只想為非作惡,在地上你們的雙手只行宰割。
ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.
3 作惡者一離母胎,即背離正路;說謊者一出母腹,即走入歧途。
ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
4 他們滿懷的毒素有如蛇毒;他們又像塞住耳朵的聾蝮,
ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ. ಘಟಸರ್ಪದ ಹಾಗೆ ಮಂದವಾಗಿದ್ದಾರೆ.
ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.
6 天主,求你把他們口中的牙齒搗爛,上主,求你把少壯獅子的牙床打斷。
ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.
7 他們有如奔湍的急水流去,他們有如被踏的青草枯萎;
ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.
8 他們有如蝸牛爬過溶化消失,又如流產的胎兒不得親見天日!
ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ.
9 他們的鍋在未覺到荊火以前,願狂怒的烈風將他們全部吹散!
ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.
10 義人看見大仇己報時,必然喜樂,他要在惡人的血中洗自己的腳。
ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.
11 如此,眾人都說:「義人果然獲得了好的報酬,世上確有執行審判的天主!
ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”