< 詩篇 6 >
1 【懺悔的懇禱】 達味詩歌,交與樂官,和以絃樂,八度低音。 上主,求你不要在震怒中責罰我,不要在氣憤中懲戒我。
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಶೆಮಿನಿಥ್ ಸ್ವರದೊಂದಿಗೆ ಹಾಡತಕ್ಕದ್ದು. ದಾವೀದನ ಕೀರ್ತನೆ. ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.
2 上主,我的體力衰弱,求你憐恤我;上主,我的骨骸戰慄,求你醫治我;
ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.
ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ?
ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ.
5 因為,在死亡中,沒有人想念你;在陰府裏,還有誰稱頌你? (Sheol )
ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು? (Sheol )
6 我已哭泣疲憊,每天夜裏,常以眼淚浸濕我的床鋪,常以鼻涕流透我的被褥。
ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.
ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.
8 作奸犯科的人快快遠離我,因為上主聽見了我的悲號;
ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ.
ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು.
10 我的仇敵必要受辱驚慌,轉瞬之間必會含羞逃亡。
ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.