< 詩篇 66 >

1 普世大地,請向天主歡呼!
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.
2 請歌頌天主聖名的光榮,請獻給天主輝煌的讚頌。
ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
3 請您們向天主說:您的作為是何等驚人!您威赫的大能,您的仇敵都向您奉承。
ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;
4 天主,普世都要朝拜您,全球都要歌頌您的聖名。
ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. (ಸೆಲಾ)
5 請您們前來觀看天主的作為,他對世人作的事實在可奇。
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.
6 他曾使海洋乾涸,使人徒步走過江河,叫我們因他而喜樂。
ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯ ಮಧ್ಯದಲ್ಲಿ ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.
7 他以自己的大能,永遠統治列國萬邦,他的眼睛鑒察萬民,不使叛逆者狂妄。
ಆತನು ಪರಾಕ್ರಮದಿಂದ ಸದಾಕಾಲವೂ ಆಳುತ್ತಾನೆ; ಜನಾಂಗಗಳನ್ನು ನೋಡಿಕೊಳ್ಳುತ್ತಾನೆ. ದಂಗೆಕೋರರು ಏಳದಿರಲಿ. (ಸೆಲಾ)
8 萬民,請您們讚美我們的天主,請傳揚天主應受的榮耀。
ಜನಾಂಗಗಳೇ, ನಮ್ಮ ದೇವರನ್ನು ವಂದಿಸಿರಿ; ಆತನನ್ನು ಸ್ತುತಿಸುವ ಧ್ವನಿ ಕೇಳಿಸಲಿ.
9 他曾使我們的性命存活,沒有讓我們的腳步滑倒。
ಆತನು ನಮ್ಮನ್ನು ಜೀವದಿಂದುಳಿಸಿ, ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.
10 天主,因為您曾考驗我們,像鍊銀子一般,也鍊我們;
೧೦ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.
11 您曾引領我們墜入了網羅,曾將鐵索繫在我們的身腰;
೧೧ನಮ್ಮನ್ನು ಬಲೆಯಲ್ಲಿ ಸಿಕ್ಕಿಸಿದಿ; ನಮ್ಮ ಸೊಂಟಕ್ಕೆ ಭಾರವಾದ ಹೊರೆಯನ್ನು ಕಟ್ಟಿದಿ;
12 您曾使異民騎在我們頭上,使我們經過水深火熱中央,最後您使我們獲得解放。
೧೨ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
13 我帶著全燔祭進入您的聖殿,我要向您償還我的各種誓願:
೧೩ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.
14 就是我從前在困厄中間,我口所許,我唇所發的願。
೧೪ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಉಚ್ಚರಿಸಿದ ಬಾಯಿಂದ ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.
15 我要以肥大牲畜作全燔祭,要把公羊的馨香獻與您,要將牛犢和山羊祭奠您。
೧೫ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. (ಸೆಲಾ)
16 凡敬愛天主的人,請您們前來靜聽,我要敘述祂為我所作所行。
೧೬ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.
17 我親口呼號過他,我舌頭稱揚過他。
೧೭ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.
18 如果我真存心作惡,上主決不會俯聽我;
೧೮ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
19 然而天主終於俯聽了我,也傾聽了我哀號的祈禱,
೧೯ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.
20 天主應受讚美:因祂從未拒絕我的懇求,從未在我身上撤回祂的仁慈。
೨೦ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ.

< 詩篇 66 >