< 詩篇 70 >
1 達味紀念歌,交與樂官。 天主,求您快來拯救我,上主,求您速來援助我。
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಬೇಡಿಕೆ. ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.
2 願那些圖謀殺害我的人,受辱退去,願那些喜歡我遭難的人,含羞出走!
ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.
3 願那些向我哈哈戲笑的人,個個滿面羞慚而退去無影?
“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ.
4 願那些尋求您的人,都因您歡欣鼓舞,願戀慕您救恩的人,都常說:大哉天主!
ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.
5 天主,我實在卑微又貧苦,求您速來救我;上主,您是我的助佑和救援,求您不要延擱。
ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ.