< 詩篇 85 >
1 詠【求賜平安與幸福】 科辣黑子孫的詩歌,交於樂官。 天主,您對您的地域已加垂憐,且將雅各伯的命改善;
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
೨ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. (ಸೆಲಾ)
೩ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
4 天主,我們的救主,求您復興我們,求您從我們身上消除您的氣憤。
೪ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
೫ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
೬ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
೭ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
8 我要聽天主上主說的話:祂向自己的聖者和子民,以及向祂回心轉意的人,所說的話確實是和平綸音。
೮ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
9 祂的救恩必接近敬箋愛祂的人,為使我們在地上久存。
೯ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
೧೦ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
೧೧ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
೧೨ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
೧೩ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.