< 撒迦利亞書 13 >
1 在那一天,為達味家和耶路撒冷的居民將開放一個水泉,為洗滌罪過和不潔。
೧ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
2 在那一天,──萬軍的上主的斷語──我要由地上剷除一切偶像的名號,不再為人所記念;並且我還要將假先知們和不潔的神由地上滅絕。
೨ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
3 將來如果有人還要冒充先知,生養他的父母必要對他說:你不能生存,因為你藉上主的名字說了謊話。生養他的父母就在他說妙語時,要把他刺死。
೩ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.
4 在那一天,每個假先知,在他說妙語時,必因自己的神視感到羞慚;他們必不再穿毛外氅,去行欺騙;
೪“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
5 他反要說:我不是先知,我是一個種田的人,因為我自幼就以務農為業。
೫ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,
6 若有人問他說:怎麼在你兩手上有這些傷痕﹖他要答說:那是我在愛我的人家裏所受的傷。
೬ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.
7 刀劍,起來攻擊我的牧人,攻擊那作我同伴的人──萬軍上主斷語。打擊牧人,羊群就要四散,然而我要向弱小的羊伸出我的手。
೭ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.
8 將來在全國──上主的斷語──三分之二必被剷除而死去,其中只留下三分之一。
೮“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
9 我要使這三分之一經過火煉,煉淨他們如同煉淨銀子,試驗他們如同試驗金子。 他們必要呼號我的名字我也必要俯聽他們;我要說:「這是我的百姓。」他們每人也要說:「上主是我的天主」。
೯“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”