< 撒迦利亞書 7 >
1 達理阿王四年九月,即「基色婁」月四日,上主的話傳給匝加利亞。
೧ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
2 由貝特耳派遺了官員撒辣責爾和他的侍從去向上主請示,
೨ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
3 去問上主殿裏的司祭和q們 2我是否在五月裏仍要哭泣和齋戒,像我多年以來所作的一樣﹖」
೩ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
೪ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
5 「你向國全體民眾和司祭們說:你們在五月和七月齋戒哭泣,至今已七十年了,豈是為了我而齋戒嗎﹖
೫“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
6 你們幾時吃喝,豈不是為你們自己吃,為你們自己喝嗎﹖
೬ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
7 難道你們不知道,當耶路撒冷還有人安居,她四週的城邑,南部平原也有人居住時,上主藉先知們所宣佈的訓令嗎﹖」
೭ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
೮ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
9 「萬軍的上主這樣說:你們應照公正裁判,以仁義和友愛彼此相待;
೯“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
10 不可欺壓寡婦和孤兒,外方人和貧窮人;不可心中圖謀惡事陷害人。
೧೦ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
೧೧“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
12 他們使自己的心硬如金剛石,不聽從法律,和萬軍的上主以自己的神感動古先知們所發表的訓令,為此,萬軍的上主曾大發憤怒。
೧೨ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
13 那麼,就如我呼喚時,你們不肯聽;同樣他們呼喊時,我也不肯聽──萬軍的上主說──
೧೩“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
14 因此,我把他們驅散到他們所不認識的各民族中,以致他們去後,國土荒廢,無人住來;他們竟使美好的土地變成了一片荒野。」
೧೪ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”