< 历代志上 11 >
1 以色列众人聚集到希伯 见大卫,说:“我们原是你的骨肉。
೧ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.
2 从前扫罗作王的时候,率领以色列人出入的是你;耶和华—你的 神也曾应许你说:‘你必牧养我的民以色列,作以色列的君。’”
೨ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
3 于是以色列的长老都来到希伯 见大卫王。大卫在希伯 耶和华面前与他们立约,他们就膏大卫作以色列的王,是照耶和华借撒母耳所说的话。
೩ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
4 大卫和以色列众人到了耶路撒冷,就是耶布斯;那时耶布斯人住在那里。
೪ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.
5 耶布斯人对大卫说:“你决不能进这地方。”然而大卫攻取锡安的保障,就是大卫的城。
೫ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.
6 大卫说:“谁先攻打耶布斯人,必作首领元帅。”洗鲁雅的儿子约押先上去,就作了元帅。
೬ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.
೭ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.
8 大卫又从米罗起,四围建筑城墙,其余的是约押修理。
೮ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.
೯ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.
10 以下记录跟随大卫勇士的首领,就是奋勇帮助他得国、照着耶和华吩咐以色列人的话、与以色列人一同立他作王的。
೧೦ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
11 大卫勇士的数目记在下面:哈革摩尼的儿子雅朔班,他是军长的统领,一时举枪杀了三百人。
೧೧ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.
12 其次是亚合人朵多的儿子以利亚撒,他是三个勇士里的一个。
೧೨ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.
13 他从前与大卫在巴斯·达闵,非利士人聚集要打仗。那里有一块长满大麦的田,众民就在非利士人面前逃跑;
೧೩ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,
14 这勇士便站在那田间击杀非利士人,救护了那田。耶和华使以色列人大获全胜。
೧೪ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.
15 三十个勇士中的三个人下到磐石那里,进了亚杜兰洞见大卫;非利士的军队在利乏音谷安营。
೧೫ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.
೧೬ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.
17 大卫渴想,说:“甚愿有人将伯利恒城门旁井里的水打来给我喝!”
೧೭ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.
18 这三个勇士就闯过非利士人的营盘,从伯利恒城门旁的井里打水,拿来奉给大卫。他却不肯喝,将水奠在耶和华面前,
೧೮ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
19 说:“我的 神啊,这三个人冒死去打水,这水好像他们的血一般,我断不敢喝!”如此,大卫不肯喝。这是三个勇士所做的事。
೧೯ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.
20 约押的兄弟亚比筛是这三个勇士的首领;他举枪杀了三百人,就在三个勇士里得了名。
೨೦ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
21 他在这三个勇士里是最尊贵的,所以作他们的首领;只是不及前三个勇士。
೨೧ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.
22 有甲薛勇士耶何耶大的儿子比拿雅行过大能的事:他杀了摩押人亚利伊勒的两个儿子,又在下雪的时候下坑里去杀了一个狮子,
೨೨ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
23 又杀了一个埃及人。埃及人身高五肘,手里拿着枪,枪杆粗如织布的机轴;比拿雅只拿着棍子下去,从埃及人手里夺过枪来,用那枪将他刺死。
೨೩ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
24 这是耶何耶大的儿子比拿雅所行的事,就在三个勇士里得了名。
೨೪ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
25 他比那三十个勇士都尊贵,只是不及前三个勇士。大卫立他作护卫长。
೨೫ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
26 军中的勇士有约押的兄弟亚撒黑,伯利恒人朵多的儿子伊勒哈难,
೨೬ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,
೨೭ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್,
೨೮ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,
೨೯ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ,
೩೦ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,
31 便雅悯族基比亚人利拜的儿子以太,比拉顿人比拿雅,
೩೧ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,
೩೨ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್,
೩೩ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.
೩೪ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ,
35 哈拉人沙甲的儿子亚希暗,吾珥的儿子以利法勒,
೩೫ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್,
೩೬ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ,
೩೭ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ,
೩೮ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,
39 亚扪人洗勒,比录人拿哈莱(拿哈莱是给洗鲁雅的儿子约押拿兵器的),
೩೯ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,
೪೧ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,
42 吕便人示撒的儿子亚第拿(他是吕便支派中的一个族长,率领三十人),
೪೨ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ
೪೩ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್,
44 亚施他拉人乌西亚,亚罗珥人何坦的儿子沙玛、耶利,
೪೪ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,
೪೫ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ,
46 玛哈未人以利业,伊利拿安的儿子耶利拜、约沙未雅,摩押人伊特玛、
೪೬ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,
೪೭ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.