< 历代志下 27 >
1 约坦登基的时候年二十五岁,在耶路撒冷作王十六年,他母亲名叫耶路沙,是撒督的女儿。
೧ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
2 约坦行耶和华眼中看为正的事,效法他父乌西雅一切所行的,只是不入耶和华的殿。百姓还行邪僻的事。
೨ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
3 约坦建立耶和华殿的上门,在俄斐勒城上多有建造,
೩ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
4 又在犹大山地建造城邑,在树林中建筑营寨和高楼。
೪ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.
5 约坦与亚扪人的王打仗胜了他们,当年他们进贡银一百他连得,小麦一万歌珥,大麦一万歌珥;第二年、第三年也是这样。
೫ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.
6 约坦在耶和华—他 神面前行正道,以致日渐强盛。
೬ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.
7 约坦其余的事和一切争战,并他的行为,都写在以色列和犹大列王记上。
೭ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.
8 他登基的时候年二十五岁,在耶路撒冷作王十六年。
೮ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.
9 约坦与他列祖同睡,葬在大卫城里。他儿子亚哈斯接续他作王。
೯ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.