< 历代志下 7 >
1 所罗门祈祷已毕,就有火从天上降下来,烧尽燔祭和别的祭。耶和华的荣光充满了殿;
ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.
2 因耶和华的荣光充满了耶和华殿,所以祭司不能进殿。
ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.
3 那火降下、耶和华的荣光在殿上的时候,以色列众人看见,就在铺石地俯伏叩拜,称谢耶和华说: 耶和华本为善, 他的慈爱永远长存!
ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.
5 所罗门王用牛二万二千,羊十二万献祭。这样,王和众民为 神的殿行奉献之礼。
ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.
6 祭司侍立,各供其职;利未人也拿着耶和华的乐器,就是大卫王造出来、借利未人颂赞耶和华的。(他的慈爱永远长存!)祭司在众人面前吹号,以色列人都站立。
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.
7 所罗门因他所造的铜坛容不下燔祭、素祭,和脂油,便将耶和华殿前院子当中分别为圣,在那里献燔祭和平安祭牲的脂油。
ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
8 那时所罗门和以色列众人,就是从哈马口直到埃及小河,所有的以色列人都聚集成为大会,守节七日。
ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.
9 第八日设立严肃会,行奉献坛的礼七日,守节七日。
ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.
10 七月二十三日,王遣散众民;他们因见耶和华向大卫和所罗门与他民以色列所施的恩惠,就都心中喜乐,各归各家去了。
ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.
11 所罗门造成了耶和华殿和王宫;在耶和华殿和王宫凡他心中所要做的,都顺顺利利地做成了。
ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.
12 夜间耶和华向所罗门显现,对他说:“我已听了你的祷告,也选择这地方作为祭祀我的殿宇。
ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.
13 我若使天闭塞不下雨,或使蝗虫吃这地的出产,或使瘟疫流行在我民中,
“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,
14 这称为我名下的子民,若是自卑、祷告,寻求我的面,转离他们的恶行,我必从天上垂听,赦免他们的罪,医治他们的地。
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.
16 现在我已选择这殿,分别为圣,使我的名永在其中,我的眼、我的心也必常在那里。
ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.
17 你若在我面前效法你父大卫所行的,遵行我一切所吩咐你的,谨守我的律例典章,
“ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,
18 我就必坚固你的国位,正如我与你父大卫所立的约,说:‘你的子孙必不断人作以色列的王。’
‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
19 “倘若你们转去丢弃我指示你们的律例诫命,去事奉敬拜别神,
“ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,
20 我就必将以色列人从我赐给他们的地上拔出根来,并且我为己名所分别为圣的殿也必舍弃不顾,使他在万民中作笑谈,被讥诮。
ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.
21 这殿虽然甚高,将来经过的人必惊讶说:‘耶和华为何向这地和这殿如此行呢?’
ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.
22 人必回答说:‘是因此地的人离弃耶和华—他们列祖的 神,就是领他们出埃及地的 神,去亲近别神,敬拜事奉他,所以耶和华使这一切灾祸临到他们。’”
ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’” ಎಂದರು.