< 但以理书 1 >
1 犹大王约雅敬在位第三年,巴比伦王尼布甲尼撒来到耶路撒冷,将城围困。
೧ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
2 主将犹大王约雅敬,并 神殿中器皿的几分交付他手。他就把这器皿带到示拿地,收入他神的庙里,放在他神的库中。
೨ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
3 王吩咐太监长亚施毗拿,从以色列人的宗室和贵胄中带进几个人来,
೩ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಾಯೇಲರಲ್ಲಿ ಅಂದರೆ ರಾಜವಂಶೀಯರಲ್ಲಿ
4 就是年少没有残疾、相貌俊美、通达各样学问、知识聪明俱备、足能侍立在王宫里的,要教他们迦勒底的文字言语。
೪ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
5 王派定将自己所用的膳和所饮的酒,每日赐他们一分,养他们三年。满了三年,好叫他们在王面前侍立。
೫ಇದಲ್ಲದೆ, “ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನ ಪದಾರ್ಥಗಳನ್ನೂ, ರಾಜನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು” ಎಂದು ಆಜ್ಞಾಪಿಸಿದನು.
6 他们中间有犹大族的人:但以理、哈拿尼雅、米沙利、亚撒利雅。
೬ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
7 太监长给他们起名:称但以理为伯提沙撒,称哈拿尼雅为沙得拉,称米沙利为米煞,称亚撒利雅为亚伯尼歌。
೭ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
8 但以理却立志不以王的膳和王所饮的酒玷污自己,所以求太监长容他不玷污自己。
೮ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.
೯ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.
10 太监长对但以理说:“我惧怕我主我王,他已经派定你们的饮食,倘若他见你们的面貌比你们同岁的少年人肌瘦,怎么好呢?这样,你们就使我的头在王那里难保。”
೧೦ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.
11 但以理对太监长所派管理但以理、哈拿尼雅、米沙利、亚撒利雅的委办说:
೧೧ದಾನಿಯೇಲನು ತನ್ನನ್ನೂ, ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವುದಕ್ಕೆ ಕಂಚುಕಿಯರ ಅಧ್ಯಕ್ಷನು
12 “求你试试仆人们十天,给我们素菜吃,白水喝,
೧೨ನೇಮಿಸಿದ್ದ ವಿಚಾರಕನಿಗೆ, “ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ ಮತ್ತು ಪಾನಕ್ಕೆ ನೀರು ನಮಗೆ ಒದಗಲಿ.
13 然后看看我们的面貌和用王膳那少年人的面貌,就照你所看的待仆人吧!”
೧೩ಆ ಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ, ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರನ್ನು ನಡೆಸು” ಎಂದು ಬಿನ್ನವಿಸಿದನು.
೧೪ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
15 过了十天,见他们的面貌比用王膳的一切少年人更加俊美肥胖。
೧೫ಅವರು ಹತ್ತು ದಿನಗಳ ನಂತರ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ, ಪುಷ್ಟರಾಗಿಯೂ ಕಾಣಿಸಿದರು.
16 于是委办撤去派他们用的膳,饮的酒,给他们素菜吃。
೧೬ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ, ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
17 这四个少年人, 神在各样文字学问上赐给他们聪明知识;但以理又明白各样的异象和梦兆。
೧೭ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
18 尼布甲尼撒王预定带进少年人来的日期满了,太监长就把他们带到王面前。
೧೮ರಾಜನು ನೇಮಿಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ, ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದು ತಂದನು.
19 王与他们谈论,见少年人中无一人能比但以理、哈拿尼雅、米沙利、亚撒利雅,所以留他们在王面前侍立。
೧೯ರಾಜನು ಅವರ ಸಂಗಡ ಮಾತನಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
20 王考问他们一切事,就见他们的智慧聪明比通国的术士和用法术的胜过十倍。
೨೦ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
೨೧ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.