< 但以理书 8 >
1 伯沙撒王在位第三年,有异象现与我—但以理,是在先前所见的异象之后。
೧ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.
2 我见了异象的时候,我以为在以拦省书珊城中;我见异象又如在乌莱河边。
೨ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
3 我举目观看,见有双角的公绵羊站在河边,两角都高。这角高过那角,更高的是后长的。
೩ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.
4 我见那公绵羊往西、往北、往南抵触。兽在它面前都站立不住,也没有能救护脱离它手的;但它任意而行,自高自大。
೪ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.
5 我正思想的时候,见有一只公山羊从西而来,遍行全地,脚不沾尘。这山羊两眼当中有一非常的角。
೫ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.
6 它往我所看见、站在河边有双角的公绵羊那里去,大发忿怒,向它直闯。
೬ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತವು ಬಂದು, ಪರಾಕ್ರಮದಿಂದ ಉಬ್ಬಿ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.
7 我见公山羊就近公绵羊,向它发烈怒,抵触它,折断它的两角。绵羊在它面前站立不住;它将绵羊触倒在地,用脚践踏,没有能救绵羊脱离它手的。
೭ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.
8 这山羊极其自高自大,正强盛的时候,那大角折断了,又在角根上向天的四方长出四个非常的角来。
೮ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.
9 四角之中有一角长出一个小角,向南、向东、向荣美之地,渐渐成为强大。
೯ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
10 它渐渐强大,高及天象,将些天象和星宿抛落在地,用脚践踏。
೧೦ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.
11 并且它自高自大,以为高及天象之君;除掉常献给君的燔祭,毁坏君的圣所。
೧೧ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
12 因罪过的缘故,有军旅和常献的燔祭交付它。它将真理抛在地上,任意而行,无不顺利。
೧೨ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
13 我听见有一位圣者说话,又有一位圣者问那说话的圣者说:“这除掉常献的燔祭和施行毁坏的罪过,将圣所与军旅践踏的异象,要到几时才应验呢?”
೧೩ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
೧೪ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.
15 我—但以理见了这异象,愿意明白其中的意思。忽有一位形状像人的站在我面前。
೧೫ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.
16 我又听见乌莱河两岸中有人声呼叫说:“加百列啊,要使此人明白这异象。”
೧೬ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.
17 他便来到我所站的地方。他一来,我就惊慌俯伏在地;他对我说:“人子啊,你要明白,因为这是关乎末后的异象。”
೧೭ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
18 他与我说话的时候,我面伏在地沉睡;他就摸我,扶我站起来,
೧೮ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,
19 说:“我要指示你恼怒临完必有的事,因为这是关乎末后的定期。
೧೯“ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.
೨೦ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.
21 那公山羊就是希腊王;两眼当中的大角就是头一王。
೨೧ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.
22 至于那折断了的角,在其根上又长出四角,这四角就是四国,必从这国里兴起来,只是权势都不及他。
೨೨ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
23 这四国末时,犯法的人罪恶满盈,必有一王兴起,面貌凶恶,能用双关的诈语。
೨೩ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.
24 他的权柄必大,却不是因自己的能力;他必行非常的毁灭,事情顺利,任意而行;又必毁灭有能力的和圣民。
೨೪ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.
25 他用权术成就手中的诡计,心里自高自大,在人坦然无备的时候,毁灭多人;又要站起来攻击万君之君,至终却非因人手而灭亡。
೨೫ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
26 所说二千三百日的异象是真的,但你要将这异象封住,因为关乎后来许多的日子。”
೨೬ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
27 于是我—但以理昏迷不醒,病了数日,然后起来办理王的事务。我因这异象惊奇,却无人能明白其中的意思。
೨೭ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.