< 出埃及记 8 >
1 耶和华吩咐摩西说:“你进去见法老,对他说:‘耶和华这样说:容我的百姓去,好事奉我。
೧ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
೨ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.
3 河里要滋生青蛙;这青蛙要上来进你的宫殿和你的卧房,上你的床榻,进你臣仆的房屋,上你百姓的身上,进你的炉灶和你的抟面盆,
೩ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.
೪ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.
5 耶和华晓谕摩西说:“你对亚伦说:‘把你的杖伸在江、河、池以上,使青蛙到埃及地上来。’”
೫ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.
6 亚伦便伸杖在埃及的诸水以上,青蛙就上来,遮满了埃及地。
೬ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.
7 行法术的也用他们的邪术照样而行,叫青蛙上了埃及地。
೭ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.
8 法老召了摩西、亚伦来,说:“请你们求耶和华使这青蛙离开我和我的民,我就容百姓去祭祀耶和华。”
೮ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.
9 摩西对法老说:“任凭你吧,我要何时为你和你的臣仆并你的百姓祈求,除灭青蛙离开你和你的宫殿只留在河里呢?”
೯ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು.
10 他说:“明天。”摩西说:“可以照你的话吧,好叫你知道没有像耶和华—我们 神的。
೧೦ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.
11 青蛙要离开你和你的宫殿,并你的臣仆与你的百姓,只留在河里。”
೧೧ಕಪ್ಪೆಗಳು ನಿನ್ನನ್ನೂ, ನಿನ್ನ ಮನೆಗಳನ್ನೂ, ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು, ನೈಲ್ ನದಿಯಲ್ಲಿ ಮಾತ್ರ ಇರುವವು” ಎಂದನು.
12 于是摩西、亚伦离开法老出去。摩西为扰害法老的青蛙呼求耶和华。
೧೨ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟು ಹೋದರು. ಆಗ ಮೋಶೆಯು ಯೆಹೋವನಿಗೆ, ನೀನು ಫರೋಹನ ಮೇಲೆ ಬರಮಾಡಿರುವ ಕಪ್ಪೆಗಳನ್ನು ತೊಲಗಿಸಬೇಕೆಂದು ಮೊರೆಯಿಟ್ಟನು.
13 耶和华就照摩西的话行。凡在房里、院中、田间的青蛙都死了。
೧೩ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.
೧೪ಜನರು ಅವುಗಳನ್ನು ರಾಶಿ ರಾಶಿಯಾಗಿ ಕೂಡಿಸಿದರು. ದೇಶವೆಲ್ಲಾ ದುರ್ವಾಸನೆಯಿಂದ ತುಂಬಿಹೋಯಿತು.
15 但法老见灾祸松缓,就硬着心,不肯听他们,正如耶和华所说的。
೧೫ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.
16 耶和华吩咐摩西说:“你对亚伦说:‘伸出你的杖击打地上的尘土,使尘土在埃及遍地变作虱子。’”
೧೬ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.
17 他们就这样行。亚伦伸杖击打地上的尘土,就在人身上和牲畜身上有了虱子;埃及遍地的尘土都变成虱子了。
೧೭ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
18 行法术的也用邪术要生出虱子来,却是不能。于是在人身上和牲畜身上都有了虱子。
೧೮ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು.
19 行法术的就对法老说:“这是 神的手段。”法老心里刚硬,不肯听摩西、亚伦,正如耶和华所说的。
೧೯ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.
20 耶和华对摩西说:“你清早起来,法老来到水边,你站在他面前,对他说:‘耶和华这样说:容我的百姓去,好事奉我。
೨೦ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.
21 你若不容我的百姓去,我要叫成群的苍蝇到你和你臣仆并你百姓的身上,进你的房屋,并且埃及人的房屋和他们所住的地都要满了成群的苍蝇。
೨೧ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.
22 当那日,我必分别我百姓所住的歌珊地,使那里没有成群的苍蝇,好叫你知道我是天下的耶和华。
೨೨ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.
23 我要将我的百姓和你的百姓分别出来。明天必有这神迹。’”
೨೩ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.
24 耶和华就这样行。苍蝇成了大群,进入法老的宫殿,和他臣仆的房屋;埃及遍地就因这成群的苍蝇败坏了。
೨೪ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.
25 法老召了摩西、亚伦来,说:“你们去,在这地祭祀你们的 神吧!”
೨೫ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ” ಎಂದನು.
26 摩西说:“这样行本不相宜,因为我们要把埃及人所厌恶的祭祀耶和华—我们的 神;若把埃及人所厌恶的在他们眼前献为祭,他们岂不拿石头打死我们吗?
೨೬ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?
27 我们要往旷野去,走三天的路程,照着耶和华—我们 神所要吩咐我们的祭祀他。”
೨೭ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.
28 法老说:“我容你们去,在旷野祭祀耶和华—你们的 神;只是不要走得很远。求你们为我祈祷。”
೨೮ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು.
29 摩西说:“我要出去求耶和华,使成群的苍蝇明天离开法老和法老的臣仆并法老的百姓;法老却不可再行诡诈,不容百姓去祭祀耶和华。”
೨೯ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು.
೩೦ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು.
31 耶和华就照摩西的话行,叫成群的苍蝇离开法老和他的臣仆并他的百姓,一个也没有留下。
೩೧ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ.
೩೨ಆದರೂ ಫರೋಹನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಜನರಿಗೆ ಹೋಗುವುದಕ್ಕೆ ಅಪ್ಪಣೆ ಕೊಡಲಿಲ್ಲ.