< 以西结书 18 >
೧ಯೆಹೋವನು ಮತ್ತೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,
2 “你们在以色列地怎么用这俗语说‘父亲吃了酸葡萄,儿子的牙酸倒了’呢?”
೨“ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”
3 主耶和华说:“我指着我的永生起誓,你们在以色列中,必不再有用这俗语的因由。
೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.
4 看哪,世人都是属我的;为父的怎样属我,为子的也照样属我;犯罪的,他必死亡。
೪ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
೫“ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,
6 未曾在山上吃过祭偶像之物,未曾仰望以色列家的偶像,未曾玷污邻舍的妻,未曾在妇人的经期内亲近她,
೬ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
7 未曾亏负人,乃将欠债之人的当头还给他;未曾抢夺人的物件,却将食物给饥饿的人吃,将衣服给赤身的人穿;
೭ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
8 未曾向借钱的弟兄取利,也未曾向借粮的弟兄多要,缩手不作罪孽,在两人之间,按至理判断;
೮ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
9 遵行我的律例,谨守我的典章,按诚实行事—这人是公义的,必定存活。这是主耶和华说的。
೯ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.
10 “他若生一个儿子,作强盗,是流人血的,不行以上所说之善,反行其中之恶,乃在山上吃过祭偶像之物,并玷污邻舍的妻,
೧೦“ಇಂಥವನನ್ನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,
೧೧ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,
12 亏负困苦和穷乏的人,抢夺人的物,未曾将当头还给人,仰望偶像,并行可憎的事,
೧೨ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,
13 向借钱的弟兄取利,向借粮的弟兄多要—这人岂能存活呢?他必不能存活。他行这一切可憎的事,必要死亡,他的罪必归到他身上。
೧೩ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.
14 “他若生一个儿子,见父亲所犯的一切罪便惧怕,不照样去做;
೧೪“ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,
15 未曾在山上吃过祭偶像之物,未曾仰望以色列家的偶像,未曾玷污邻舍的妻,
೧೫“ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
16 未曾亏负人,未曾取人的当头,未曾抢夺人的物件,却将食物给饥饿的人吃,将衣服给赤身的人穿,
೧೬ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
17 缩手不害贫穷人,未曾向借钱的弟兄取利,也未曾向借粮的弟兄多要;他顺从我的典章,遵行我的律例,就不因父亲的罪孽死亡,定要存活。
೧೭ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
18 至于他父亲;因为欺人太甚,抢夺弟兄,在本国的民中行不善,他必因自己的罪孽死亡。
೧೮ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.
19 “你们还说:‘儿子为何不担当父亲的罪孽呢?’儿子行正直与合理的事,谨守遵行我的一切律例,他必定存活。
೧೯“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.
20 惟有犯罪的,他必死亡。儿子必不担当父亲的罪孽,父亲也不担当儿子的罪孽。义人的善果必归自己,恶人的恶报也必归自己。
೨೦ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.
21 “恶人若回头离开所做的一切罪恶,谨守我一切的律例,行正直与合理的事,他必定存活,不致死亡。
೨೧“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
22 他所犯的一切罪过都不被记念,因所行的义,他必存活。
೨೨ಅವನು ಮಾಡಿದ ಯಾವ ಅಪರಾಧವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.”
23 主耶和华说:恶人死亡,岂是我喜悦的吗?不是喜悦他回头离开所行的道存活吗?
೨೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
24 义人若转离义行而作罪孽,照着恶人所行一切可憎的事而行,他岂能存活吗?他所行的一切义都不被记念;他必因所犯的罪、所行的恶死亡。
೨೪ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
25 “你们还说:‘主的道不公平!’以色列家啊,你们当听,我的道岂不公平吗?你们的道岂不是不公平吗?
೨೫“ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
26 义人若转离义行而作罪孽死亡,他是因所作的罪孽死亡。
೨೬ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.
27 再者,恶人若回头离开所行的恶,行正直与合理的事,他必将性命救活了。
೨೭ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
28 因为他思量,回头离开所犯的一切罪过,必定存活,不致死亡。
೨೮ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.
29 以色列家还说:‘主的道不公平!’以色列家啊,我的道岂不公平吗?你们的道岂不是不公平吗?”
೨೯ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಿಲ್ಲವೋ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”
30 所以主耶和华说:“以色列家啊,我必按你们各人所行的审判你们。你们当回头离开所犯的一切罪过。这样,罪孽必不使你们败亡。
೩೦ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
31 你们要将所犯的一切罪过尽行抛弃,自做一个新心和新灵。以色列家啊,你们何必死亡呢?
೩೧“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
32 主耶和华说:我不喜悦那死人之死,所以你们当回头而存活。”
೩೨ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.