< 以西结书 31 >
೧ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 “人子啊,你要向埃及王法老和他的众人说: 在威势上谁能与你相比呢?
೨“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಮತ್ತು ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ, ನಿನ್ನ ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?
3 亚述王曾如黎巴嫩中的香柏树, 枝条荣美,影密如林, 极其高大,树尖插入云中。
೩ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
4 众水使它生长; 深水使它长大。 所栽之地有江河围流, 汊出的水道延到田野诸树。
೪ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದಿಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂಮಿಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ನೀಡಿತ್ತು.
5 所以它高大超过田野诸树; 发旺的时候,枝子繁多, 因得大水之力枝条长长。
೫ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು.
6 空中的飞鸟都在枝子上搭窝; 田野的走兽都在枝条下生子; 所有大国的人民都在它荫下居住。
೬ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.
೭ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.
8 神园中的香柏树不能遮蔽它; 松树不及它的枝子; 枫树不及它的枝条; 神园中的树都没有它荣美。
೮ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.
9 我使它的枝条蕃多,成为荣美, 以致 神伊甸园中的树都嫉妒它。”
೯ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.”
10 所以主耶和华如此说:“因它高大,树尖插入云中,心骄气傲,
೧೦ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು.
11 我就必将它交给列国中大有威势的人;他必定办它。我因它的罪恶,已经驱逐它。
೧೧ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.
12 外邦人,就是列邦中强暴的,将它砍断弃掉。它的枝条落在山间和一切谷中,它的枝子折断,落在地的一切河旁。地上的众民已经走去,离开它的荫下。
೧೨“ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.
13 空中的飞鸟都要宿在这败落的树上,田野的走兽都要卧在它的枝条下,
೧೩ಅದರ ಬುಡದ ಮೇಲೆ ಎಲ್ಲಾ ಆಕಾಶದ ಪಕ್ಷಿಗಳು ಕುಳಿತುಕೊಳ್ಳುವವು; ಅದರ ಕೊಂಬೆಗಳಲ್ಲಿ ಸಮಸ್ತ ಭೂಜಂತುಗಳು ಇರುವವು.
14 好使水旁的诸树不因高大而自尊,也不将树尖插入云中,并且那些得水滋润、有势力的,也不得高大自立。因为它们在世人中,和下坑的人都被交与死亡,到阴府去了。”
೧೪“ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”
15 主耶和华如此说:“它下阴间的那日,我便使人悲哀。我为它遮盖深渊,使江河凝结,大水停流;我也使黎巴嫩为它凄惨,田野的诸树都因它发昏。 (Sheol )
೧೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. (Sheol )
16 我将它扔到阴间,与下坑的人一同下去。那时,列国听见它坠落的响声就都震动,并且伊甸的一切树—就是黎巴嫩得水滋润、最佳最美的树—都在阴府受了安慰。 (Sheol )
೧೬ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು. (Sheol )
17 它们也与它同下阴间,到被杀的人那里。它们曾作它的膀臂,在列国中它的荫下居住。 (Sheol )
೧೭ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. (Sheol )
18 在这样荣耀威势上,在伊甸园诸树中,谁能与你相比呢?然而你要与伊甸的诸树一同下到阴府,在未受割礼的人中,与被杀的人一同躺卧。 “法老和他的群众乃是如此。这是主耶和华说的。”
೧೮“ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”