< 以西结书 8 >

1 第六年六月初五日,我坐在家中;犹大的众长老坐在我面前。在那里主耶和华的灵降在我身上。
ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.
2 我观看,见有形象仿佛火的形状,从他腰以下的形状有火,从他腰以上有光辉的形状,仿佛光耀的精金。
ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.
3 他伸出仿佛一只手的样式,抓住我的一绺头发,灵就将我举到天地中间,在 神的异象中,带我到耶路撒冷朝北的内院门口,在那里有触动主怒偶像的坐位,就是惹动忌邪的。
ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
4 谁知,在那里有以色列 神的荣耀,形状与我在平原所见的一样。
ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.
5 神对我说:“人子啊,你举目向北观看。”我就举目向北观看,见祭坛门的北边,在门口有这惹忌邪的偶像;
ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.
6 又对我说:“人子啊,以色列家所行的,就是在此行这大可憎的事,使我远离我的圣所,你看见了吗?你还要看见另有大可憎的事。”
ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
7 他领我到院门口。我观看,见墙上有个窟窿。
ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.
8 他对我说:“人子啊,你要挖墙。”我一挖墙,见有一门。
ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.
9 他说:“你进去,看他们在这里所行可憎的恶事。”
ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
10 我进去一看,谁知,在四面墙上画着各样爬物和可憎的走兽,并以色列家一切的偶像。
೧೦ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
11 在这些像前有以色列家的七十个长老站立,沙番的儿子雅撒尼亚也站在其中。各人手拿香炉,烟云的香气上腾。
೧೧ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
12 他对我说:“人子啊,以色列家的长老暗中在各人画像屋里所行的,你看见了吗?他们常说:‘耶和华看不见我们;耶和华已经离弃这地。’”
೧೨ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
13 他又说:“你还要看见他们另外行大可憎的事。”
೧೩ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.
14 他领我到耶和华殿外院朝北的门口。谁知,在那里有妇女坐着,为搭模斯哭泣。
೧೪ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್” ದೇವತೆಗಾಗಿ ಅಳುತ್ತಾ ಕುಳಿತಿದ್ದರು.
15 他对我说:“人子啊,你看见了吗?你还要看见比这更可憎的事。”
೧೫ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
16 他又领我到耶和华殿的内院。谁知,在耶和华的殿门口、廊子和祭坛中间,约有二十五个人背向耶和华的殿,面向东方拜日头。
೧೬ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
17 他对我说:“人子啊,你看见了吗?犹大家在此行这可憎的事还算为小吗?他们在这地遍行强暴,再三惹我发怒,他们手拿枝条举向鼻前。
೧೭ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
18 因此,我也要以忿怒行事,我眼必不顾惜,也不可怜他们;他们虽向我耳中大声呼求,我还是不听。”
೧೮ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

< 以西结书 8 >