< 创世记 16 >
1 亚伯兰的妻子撒莱不给他生儿女。撒莱有一个使女,名叫夏甲,是埃及人。
೧ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
2 撒莱对亚伯兰说:“耶和华使我不能生育。求你和我的使女同房,或者我可以因她得孩子。”亚伯兰听从了撒莱的话。
೨ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.
3 于是亚伯兰的妻子撒莱将使女埃及人夏甲给了丈夫为妾;那时亚伯兰在迦南已经住了十年。
೩ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.
4 亚伯兰与夏甲同房,夏甲就怀了孕;她见自己有孕,就小看她的主母。
೪ಅವನು ಹಾಗರಳನ್ನು ಸಂಗಮಿಸಲು ಆಕೆಯು ಬಸುರಾದಳು. ತಾನು ಬಸುರಾದೆನೆಂದು ತಿಳಿದುಕೊಂಡಾಗ ಅವಳು ತನ್ನ ಯಜಮಾನಿಯನ್ನು ತಾತ್ಸಾರ ಮಾಡತೊಡಗಿದಳು.
5 撒莱对亚伯兰说:“我因你受屈。我将我的使女放在你怀中,她见自己有了孕,就小看我。愿耶和华在你我中间判断。”
೫ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.
6 亚伯兰对撒莱说:“使女在你手下,你可以随意待她。”撒莱苦待她,她就从撒莱面前逃走了。
೬ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.
೭ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
8 对她说:“撒莱的使女夏甲,你从哪里来?要往哪里去?”夏甲说:“我从我的主母撒莱面前逃出来。”
೮“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.
9 耶和华的使者对她说:“你回到你主母那里,服在她手下”;
೯ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.
10 又说:“我必使你的后裔极其繁多,甚至不可胜数”;
೧೦ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.
11 并说:“你如今怀孕要生一个儿子,可以给他起名叫以实玛利,因为耶和华听见了你的苦情。
೧೧ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
12 他为人必像野驴。他的手要攻打人,人的手也要攻打他;他必住在众弟兄的东边。”
೧೨ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.
13 夏甲就称那对她说话的耶和华为“看顾人的 神”。因而说:“在这里我也看见那看顾我的吗?”
೧೩ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
14 所以这井名叫庇耳·拉海·莱。这井正在加低斯和巴列中间。
೧೪ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
15 后来夏甲给亚伯兰生了一个儿子;亚伯兰给他起名叫以实玛利。
೧೫ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.
16 夏甲给亚伯兰生以实玛利的时候,亚伯兰年八十六岁。
೧೬ಹಾಗರಳು ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರ್ಷದವನಾಗಿದ್ದನು.