< 创世记 26 >
1 在亚伯拉罕的日子,那地有一次饥荒;这时又有饥荒,以撒就往基拉耳去,到非利士人的王亚比米勒那里。
೧ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.
2 耶和华向以撒显现,说:“你不要下埃及去,要住在我所指示你的地。
೨ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
3 你寄居在这地,我必与你同在,赐福给你,因为我要将这些地都赐给你和你的后裔。我必坚定我向你父亚伯拉罕所起的誓。
೩ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
4 我要加增你的后裔,像天上的星那样多,又要将这些地都赐给你的后裔。并且地上万国必因你的后裔得福—
೪ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.
5 都因亚伯拉罕听从我的话,遵守我的吩咐和我的命令、律例、法度。”
೫ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.
೬ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
7 那地方的人问到他的妻子,他便说:“那是我的妹子。”原来他怕说:“是我的妻子”;他心里想:“恐怕这地方的人为利百加的缘故杀我”,因为她容貌俊美。
೭ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.
8 他在那里住了许久。有一天,非利士人的王亚比米勒从窗户里往外观看,见以撒和他的妻子利百加戏玩。
೮ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
9 亚比米勒召了以撒来,对他说:“她实在是你的妻子,你怎么说她是你的妹子?”以撒说:“我心里想,恐怕我因她而死。”
೯ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು.
10 亚比米勒说:“你向我们做的是什么事呢?民中险些有人和你的妻同寝,把我们陷在罪里。”
೧೦ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”
11 于是亚比米勒晓谕众民说:“凡沾着这个人,或是他妻子的,定要把他治死。”
೧೧ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.
12 以撒在那地耕种,那一年有百倍的收成。耶和华赐福给他,
೧೨ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
೧೩ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.
14 他有羊群牛群,又有许多仆人,非利士人就嫉妒他。
೧೪ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
15 当他父亲亚伯拉罕在世的日子,他父亲的仆人所挖的井,非利士人全都塞住,填满了土。
೧೫ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
16 亚比米勒对以撒说:“你离开我们去吧。因为你比我们强盛得多。”
೧೬ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;
17 以撒就离开那里,在基拉耳谷支搭帐棚,住在那里。
೧೭ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.
18 当他父亲亚伯拉罕在世之日所挖的水井因非利士人在亚伯拉罕死后塞住了,以撒就重新挖出来,仍照他父亲所叫的叫那些井的名字。
೧೮ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
೧೯ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.
20 基拉耳的牧人与以撒的牧人争竞,说:“这水是我们的。”以撒就给那井起名叫埃色,因为他们和他相争。
೨೦ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.
21 以撒的仆人又挖了一口井,他们又为这井争竞,因此以撒给这井起名叫西提拿。
೨೧ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ನಾ” ಎಂದು ಹೆಸರಿಟ್ಟನು.
22 以撒离开那里,又挖了一口井,他们不为这井争竞了,他就给那井起名叫利河伯。他说:“耶和华现在给我们宽阔之地,我们必在这地昌盛。”
೨೨ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.
೨೩ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.
24 当夜耶和华向他显现,说:“我是你父亲亚伯拉罕的 神,不要惧怕!因为我与你同在,要赐福给你,并要为我仆人亚伯拉罕的缘故,使你的后裔繁多。”
೨೪ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.
25 以撒就在那里筑了一座坛,求告耶和华的名,并且支搭帐棚;他的仆人便在那里挖了一口井。
೨೫ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.
26 亚比米勒,同他的朋友亚户撒和他的军长非各,从基拉耳来见以撒。
೨೬ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು.
27 以撒对他们说:“你们既然恨我,打发我走了,为什么到我这里来呢?”
೨೭ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,
28 他们说:“我们明明地看见耶和华与你同在,便说,不如我们两下彼此起誓,彼此立约,
೨೮“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
29 使你不害我们,正如我们未曾害你,一味地厚待你,并且打发你平平安安地走。你是蒙耶和华赐福的了。”
೨೯ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.
೩೦ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.
31 他们清早起来彼此起誓。以撒打发他们走,他们就平平安安地离开他走了。
೩೧ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.
32 那一天,以撒的仆人来,将挖井的事告诉他说:“我们得了水了。”
೩೨ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
33 他就给那井起名叫示巴;因此那城叫做别是巴,直到今日。
೩೩ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.
34 以扫四十岁的时候娶了赫人比利的女儿犹滴,与赫人以伦的女儿巴实抹为妻。
೩೪ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.
೩೫ಇವರ ದೆಸೆಯಿಂದ ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಉಂಟಾಯಿತು.