< 创世记 43 >

1 那地的饥荒甚大。
ದೇಶದಲ್ಲಿ ಬರವು ಘೋರವಾಗಿತ್ತು.
2 他们从埃及带来的粮食吃尽了,他们的父亲就对他们说:“你们再去给我籴些粮来。”
ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.
3 犹大对他说:“那人谆谆地告诫我们说:‘你们的兄弟若不与你们同来,你们就不得见我的面。’
ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.
4 你若打发我们的兄弟与我们同去,我们就下去给你籴粮;
ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ.
5 你若不打发他去,我们就不下去,因为那人对我们说:‘你们的兄弟若不与你们同来,你们就不得见我的面。’”
ಅವನನ್ನು ಕಳುಹಿಸದೆ ಹೋದರೆ, ನಾವು ಹೋಗುವುದಿಲ್ಲ. ಏಕೆಂದರೆ ಆ ಮನುಷ್ಯನು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ, ನನ್ನ ಮುಖವನ್ನು ನೋಡಬಾರದು,’ ಎಂದು ನಮಗೆ ಹೇಳಿದ್ದಾನೆ,” ಎಂದನು.
6 以色列说:“你们为什么这样害我,告诉那人你们还有兄弟呢?”
ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.
7 他们回答说:“那人详细问到我们和我们的亲属,说:‘你们的父亲还在吗?你们还有兄弟吗?’我们就按着他所问的告诉他,焉能知道他要说‘必须把你们的兄弟带下来’呢?”
ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.
8 犹大又对他父亲以色列说:“你打发童子与我同去,我们就起身下去,好叫我们和你,并我们的妇人孩子,都得存活,不至于死。
ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.
9 我为他作保;你可以从我手中追讨,我若不带他回来交在你面前,我情愿永远担罪。
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.
10 我们若没有耽搁,如今第二次都回来了。”
ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು.
11 他们的父亲以色列说:“若必须如此,你们就当这样行:可以将这地土产中最好的乳香、蜂蜜、香料、没药、榧子、杏仁都取一点,收在器具里,带下去送给那人作礼物,
ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
12 又要手里加倍地带银子,并将归还在你们口袋内的银子仍带在手里;那或者是错了。
ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.
13 也带着你们的兄弟,起身去见那人。
ನಿಮ್ಮ ಸಹೋದರನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ತಿರುಗಿ ಹೋಗಿರಿ.
14 但愿全能的 神使你们在那人面前蒙怜悯,释放你们的那弟兄和便雅悯回来。我若丧了儿子,就丧了吧!”
ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.
15 于是,他们拿着那礼物,又手里加倍地带银子,并且带着便雅悯,起身下到埃及,站在约瑟面前。
ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.
16 约瑟见便雅悯和他们同来,就对家宰说:“将这些人领到屋里。要宰杀牲畜,预备筵席,因为晌午这些人同我吃饭。”
ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.
17 家宰就遵着约瑟的命去行,领他们进约瑟的屋里。
ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು.
18 他们因为被领到约瑟的屋里,就害怕,说:“领我们到这里来,必是因为头次归还在我们口袋里的银子,找我们的错缝,下手害我们,强取我们为奴仆,抢夺我们的驴。”
ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.
19 他们就挨近约瑟的家宰,在屋门口和他说话,
ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,
20 说:“我主啊,我们头次下来实在是要籴粮。
“ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ.
21 后来到了住宿的地方,我们打开口袋,不料,各人的银子,分量足数,仍在各人的口袋内,现在我们手里又带回来了。
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.
22 另外又带下银子来籴粮。不知道先前谁把银子放在我们的口袋里。”
ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಈ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು,” ಎಂದರು.
23 家宰说:“你们可以放心,不要害怕,是你们的 神和你们父亲的 神赐给你们财宝在你们的口袋里;你们的银子,我早已收了。”他就把西缅带出来,交给他们。
ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
24 家宰就领他们进约瑟的屋里,给他们水洗脚,又给他们草料喂驴。
ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
25 他们就预备那礼物,等候约瑟晌午来,因为他们听见要在那里吃饭。
ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
26 约瑟来到家里,他们就把手中的礼物拿进屋去给他,又俯伏在地,向他下拜。
ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.
27 约瑟问他们好,又问:“你们的父亲—就是你们所说的那老人家平安吗?他还在吗?”
ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.
28 他们回答说:“你仆人—我们的父亲平安;他还在。”于是他们低头下拜。
ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.
29 约瑟举目看见他同母的兄弟便雅悯,就说:“你们向我所说那顶小的兄弟就是这位吗?”又说:“小儿啊,愿 神赐恩给你!”
ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.
30 约瑟爱弟之情发动,就急忙寻找可哭之地,进入自己的屋里,哭了一场。
ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
31 他洗了脸出来,勉强隐忍,吩咐人摆饭。
ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.
32 他们就为约瑟单摆了一席,为那些人又摆了一席,也为和约瑟同吃饭的埃及人另摆了一席,因为埃及人不可和希伯来人一同吃饭;那原是埃及人所厌恶的。
ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.
33 约瑟使众弟兄在他面前排列坐席,都按着长幼的次序,众弟兄就彼此诧异。
ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.
34 约瑟把他面前的食物分出来,送给他们;但便雅悯所得的比别人多五倍。他们就饮酒,和约瑟一同宴乐。
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.

< 创世记 43 >