< 何西阿书 4 >
1 以色列人哪,你们当听耶和华的话。 耶和华与这地的居民争辩, 因这地上无诚实, 无良善,无人认识 神。
೧ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.
2 但起假誓,不践前言, 杀害,偷盗,奸淫,行强暴, 杀人流血,接连不断。
೨ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.
3 因此,这地悲哀, 其上的民、田野的兽、 空中的鸟必都衰微, 海中的鱼也必消灭。
೩ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.
4 然而,人都不必争辩,也不必指责, 因为这民与抗拒祭司的人一样。
೪ಯಾರೂ ಪ್ರತಿಭಟಿಸದಿರಲಿ, ಯಾರೂ ಖಂಡಿಸದಿರಲಿ; ನಿಮ್ಮ ಜನರು ಯಾಜಕನೊಂದಿಗೆ ಹೋರಾಡುವವರಂತಿದ್ದಾರೆ.
5 你这祭司必日间跌倒; 先知也必夜间与你一同跌倒; 我必灭绝你的母亲。
೫ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.
6 我的民因无知识而灭亡。 你弃掉知识, 我也必弃掉你, 使你不再给我作祭司。 你既忘了你 神的律法, 我也必忘记你的儿女。
೬ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
7 祭司越发增多,就越发得罪我; 我必使他们的荣耀变为羞辱。
೭ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.
೮ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.
9 将来民如何, 祭司也必如何; 我必因他们所行的惩罚他们, 照他们所做的报应他们。
೯ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.
10 他们吃,却不得饱; 行淫,而不得立后; 因为他们离弃耶和华, 不遵他的命。
೧೦ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.
೧೧ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
12 我的民求问木偶, 以为木杖能指示他们; 因为他们的淫心使他们失迷, 他们就行淫离弃 神, 不守约束,
೧೨ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.
13 在各山顶,各高冈的橡树、 杨树、栗树之下,献祭烧香, 因为树影美好。 所以,你们的女儿淫乱, 你们的新妇行淫。
೧೩ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ?
14 你们的女儿淫乱, 你们的新妇行淫, 我却不惩罚她们; 因为你们自己离群与娼妓同居, 与妓女一同献祭。 这无知的民必致倾倒。
೧೪ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.
15 以色列啊,你虽然行淫, 犹大却不可犯罪。 不要往吉甲去, 不要上到伯·亚文, 也不要指着永生的耶和华起誓。
೧೫ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.
16 以色列倔强, 犹如倔强的母牛; 现在耶和华要放他们, 如同放羊羔在宽阔之地。
೧೬ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?
೧೭ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.
18 他们所喝的已经发酸, 他们时常行淫, 他们的官长最爱羞耻的事。
೧೮ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.
19 风把他们裹在翅膀里; 他们因所献的祭必致蒙羞。
೧೯ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.