< 以赛亚书 28 >

1 祸哉!以法莲的酒徒, 住在肥美谷的山上, 他们心里高傲, 以所夸的为冠冕, 犹如将残之花。
ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!
2 看哪,主有一大能大力者, 像一阵冰雹, 像毁灭的暴风, 像涨溢的大水, 他必用手将冠冕摔落于地。
ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
3 以法莲高傲的酒徒, 他的冠冕必被踏在脚下。
ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
4 那荣美将残之花, 就是在肥美谷山上的, 必像夏令以前初熟的无花果; 看见这果的就注意, 一到手中就吞吃了。
ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.
5 到那日,万军之耶和华 必作他余剩之民的荣冠华冕,
ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
6 也作了在位上行审判者公平之灵, 并城门口打退仇敌者的力量。
ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
7 就是这地的人也因酒摇摇晃晃, 因浓酒东倒西歪。 祭司和先知因浓酒摇摇晃晃, 被酒所困, 因浓酒东倒西歪。 他们错解默示, 谬行审判。
ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
8 因为各席上满了呕吐的污秽, 无一处干净。
ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.
9 讥诮先知的说: 他要将知识指教谁呢? 要使谁明白传言呢? 是那刚断奶离怀的吗?
ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?
10 他竟命上加命,令上加令, 律上加律,例上加例, 这里一点,那里一点。
೧೦ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.
11 先知说:不然,主要借异邦人的嘴唇 和外邦人的舌头对这百姓说话。
೧೧ಹೌದು, ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಯೆಹೋವನು ಈ ಜನರೊಂದಿಗೆ ಮಾತನಾಡುವನು.
12 他曾对他们说: 你们要使疲乏人得安息, 这样才得安息,才得舒畅, 他们却不肯听。
೧೨ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.
13 所以,耶和华向他们说的话是 命上加命,令上加令, 律上加律,例上加例, 这里一点,那里一点, 以致他们前行仰面跌倒, 而且跌碎,并陷入网罗被缠住。
೧೩ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
14 所以,你们这些亵慢的人, 就是辖管住在耶路撒冷这百姓的, 要听耶和华的话。
೧೪ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
15 你们曾说: 我们与死亡立约, 与阴间结盟; 敌军如水涨漫经过的时候, 必不临到我们; 因我们以谎言为避所, 在虚假以下藏身。 (Sheol h7585)
೧೫ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ. (Sheol h7585)
16 所以,主耶和华如此说: 看哪,我在锡安放一块石头作为根基, 是试验过的石头, 是稳固根基,宝贵的房角石; 信靠的人必不着急。
೧೬ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
17 我必以公平为准绳, 以公义为线铊。 冰雹必冲去谎言的避所; 大水必漫过藏身之处。
೧೭ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
18 你们与死亡所立的约必然废掉, 与阴间所结的盟必立不住。 敌军如水涨漫经过的时候, 你们必被他践踏; (Sheol h7585)
೧೮ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು. (Sheol h7585)
19 每逢经过必将你们掳去。 因为每早晨他必经过, 白昼黑夜都必如此。 明白传言的必受惊恐。
೧೯ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು; ಹೊತ್ತಾರೆಯಿಂದ ಹೊತ್ತಾರೆಗೆ ಹಗಲು ರಾತ್ರಿಯೂ ಹಾದುಹೋಗುವುದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವುದರಿಂದ ಭಯವಾಗುವುದು.
20 原来,床榻短,使人不能舒身; 被窝窄,使人不能遮体。
೨೦ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”
21 耶和华必兴起,像在毗拉心山; 他必发怒,像在基遍谷, 好做成他的工,就是非常的工; 成就他的事,就是奇异的事。
೨೧ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
22 现在你们不可亵慢, 恐怕捆你们的绑索更结实了; 因为我从主—万军之耶和华那里听见, 已经决定在全地上施行灭绝的事。
೨೨ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
23 你们当侧耳听我的声音, 留心听我的言语。
೨೩ನನ್ನ ಧ್ವನಿಯನ್ನು ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
24 那耕地为要撒种的, 岂是常常耕地呢? 岂是常常开垦耙地呢?
೨೪ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?
25 他拉平了地面, 岂不就撒种小茴香, 播种大茴香, 按行列种小麦, 在定处种大麦, 在田边种粗麦呢?
೨೫ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?
26 因为他的 神教导他务农相宜, 并且指教他。
೨೬ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ, ತಿದ್ದುತ್ತಾನೆ.
27 原来打小茴香,不用尖利的器具, 轧大茴香,也不用碌碡; 但用杖打小茴香, 用棍打大茴香。
೨೭ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.
28 做饼的粮食是用磨磨碎, 因它不必常打; 虽用碌碡和马打散, 却不磨它。
೨೮ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.
29 这也是出于万军之耶和华— 他的谋略奇妙; 他的智慧广大。
೨೯ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.

< 以赛亚书 28 >