< 以赛亚书 39 >
1 那时,巴比伦王巴拉但的儿子米罗达·巴拉但听见希西家病而痊愈,就送书信和礼物给他。
೧ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
2 希西家喜欢见使者,就把自己宝库的金子、银子、香料、贵重的膏油,和他武库的一切军器,并所有的财宝都给他们看;他家中和全国之内,希西家没有一样不给他们看的。
೨ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
3 于是先知以赛亚来见希西家王,问他说:“这些人说什么?他们从哪里来见你?”希西家说:“他们从远方的巴比伦来见我。”
೩ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.
4 以赛亚说:“他们在你家里看见了什么?”希西家说:“凡我家中所有的,他们都看见了;我财宝中没有一样不给他们看的。”
೪ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು.
೫ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.
6 日子必到,凡你家里所有的,并你列祖积蓄到如今的,都要被掳到巴比伦去,不留下一样;这是耶和华说的。
೬ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.
7 并且从你本身所生的众子,其中必有被掳去、在巴比伦王宫里当太监的。”
೭“ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.
8 希西家对以赛亚说:“你所说耶和华的话甚好,因为在我的年日中必有太平和稳固的景况。”
೮“ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.