< 以赛亚书 8 >

1 耶和华对我说:“你取一个大牌,拿人所用的笔,写上‘玛黑珥·沙拉勒·哈施·罢斯’。
ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.
2 我要用诚实的见证人,祭司乌利亚和耶比利家的儿子撒迦利亚记录这事。”
ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
3 我—以赛亚与妻子同室;她怀孕生子,耶和华就对我说:“给他起名叫玛黑珥·沙拉勒·哈施·罢斯;
ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.
4 因为在这小孩子不晓得叫父叫母之先,大马士革的财宝和撒马利亚的掳物必在亚述王面前搬了去。”
ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.
5 耶和华又晓谕我说:
ಯೆಹೋವ ದೇವರು ಮತ್ತೊಮ್ಮೆ ನನಗೆ,
6 “这百姓既厌弃西罗亚缓流的水,喜悦利汛和利玛利的儿子;
“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,
7 因此,主必使大河翻腾的水猛然冲来,就是亚述王和他所有的威势,必漫过一切的水道,涨过两岸;
ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,
8 必冲入犹大,涨溢泛滥,直到颈项。以马内利啊,他展开翅膀,遍满你的地。”
ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”
9 列国的人民哪,任凭你们喧嚷,终必破坏; 远方的众人哪,当侧耳而听! 任凭你们束起腰来,终必破坏; 你们束起腰来,终必破坏。
ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!
10 任凭你们同谋,终归无有; 任凭你们言定,终不成立; 因为 神与我们同在。
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.
11 耶和华以大能的手,指教我不可行这百姓所行的道,对我这样说:
ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ,
12 “这百姓说同谋背叛,你们不要说同谋背叛。他们所怕的,你们不要怕,也不要畏惧。
“ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
13 但要尊万军之耶和华为圣,以他为你们所当怕的,所当畏惧的。
ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.
14 他必作为圣所,却向以色列两家作绊脚的石头,跌人的磐石;向耶路撒冷的居民作为圈套和网罗。
ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.
15 许多人必在其上绊脚跌倒,而且跌碎,并陷入网罗,被缠住。”
ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”
16 你要卷起律法书,在我门徒中间封住训诲。
ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.
17 我要等候那掩面不顾雅各家的耶和华;我也要仰望他。
ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.
18 看哪,我与耶和华所给我的儿女,就是从住在锡安山万军之耶和华来的,在以色列中作为预兆和奇迹。
ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
19 有人对你们说:“当求问那些交鬼的和行巫术的,就是声音绵蛮,言语微细的。”你们便回答说:“百姓不当求问自己的 神吗?岂可为活人求问死人呢?”
ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?
20 人当以训诲和法度为标准;他们所说的,若不与此相符,必不得见晨光。
ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.
21 他们必经过这地,受艰难,受饥饿;饥饿的时候,心中焦躁,咒骂自己的君王和自己的 神。
ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
22 仰观上天,俯察下地,不料,尽是艰难、黑暗,和幽暗的痛苦。他们必被赶入乌黑的黑暗中去。
ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.

< 以赛亚书 8 >