< 耶利米书 21 >

1 耶和华的话临到耶利米。那时,西底家王打发玛基雅的儿子巴施户珥和玛西雅的儿子祭司西番雅去见耶利米,说:
ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,
2 “请你为我们求问耶和华;因为巴比伦王尼布甲尼撒来攻击我们,或者耶和华照他一切奇妙的作为待我们,使巴比伦王离开我们上去。”
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
3 耶利米对他们说:“你们当对西底家这样说:
ಆಗ ಯೆರೆಮೀಯನು, “ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ” ಎಂದು ಅವರಿಗೆ ಹೇಳಿದನು.
4 ‘耶和华—以色列的 神如此说:我要使你们手中的兵器,就是你们在城外与巴比伦王和围困你们的迦勒底人打仗的兵器翻转过来,又要使这些都聚集在这城中。
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.
5 并且我要在怒气、忿怒,和大恼恨中,用伸出来的手,并大能的膀臂,亲自攻击你们;
ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.
6 又要击打这城的居民,连人带牲畜都必遭遇大瘟疫死亡。
ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.
7 以后我要将犹大王西底家和他的臣仆百姓,就是在城内,从瘟疫、刀剑、饥荒中剩下的人,都交在巴比伦王尼布甲尼撒的手中和他们仇敌,并寻索其命的人手中。巴比伦王必用刀击杀他们,不顾惜,不可怜,不怜悯。这是耶和华说的。’
ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.
8 “你要对这百姓说:‘耶和华如此说:看哪,我将生命的路和死亡的路摆在你们面前。
“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.
9 住在这城里的必遭刀剑、饥荒、瘟疫而死;但出去归降围困你们迦勒底人的必得存活,要以自己的命为掠物。
ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
10 耶和华说:我向这城变脸,降祸不降福;这城必交在巴比伦王的手中,他必用火焚烧。’”
೧೦ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”
11 “至于犹大王的家,你们当听耶和华的话。
೧೧ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.
12 大卫家啊,耶和华如此说: 你们每早晨要施行公平, 拯救被抢夺的脱离欺压人的手, 恐怕我的忿怒因你们的恶行发作, 如火着起,甚至无人能以熄灭。
೧೨ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
13 耶和华说:住山谷和平原磐石上的居民, 你们说:谁能下来攻击我们? 谁能进入我们的住处呢? 看哪,我与你们为敌。
೧೩ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,
14 耶和华又说: 我必按你们做事的结果刑罚你们; 我也必使火在耶路撒冷的林中着起, 将她四围所有的尽行烧灭。”
೧೪ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.

< 耶利米书 21 >