< 约伯记 17 >
1 我的心灵消耗,我的日子灭尽; 坟墓为我预备好了。
ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ.
ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು.
3 愿主拿凭据给我,自己为我作保。 在你以外谁肯与我击掌呢?
“ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ; ನಿಮ್ಮನ್ನು ಬಿಟ್ಟು ಯಾರು ನನಗೆ ಭದ್ರತೆಯನ್ನು ಕೊಡುವವರು?
ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ.
5 控告他的朋友、以朋友为可抢夺的, 连他儿女的眼睛也要失明。
ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು.
6 神使我作了民中的笑谈; 他们也吐唾沫在我脸上。
“ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.
ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ.
8 正直人因此必惊奇; 无辜的人要兴起攻击不敬虔之辈。
ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ; ನಿರಪರಾಧಿಯು ಭಕ್ತಿಹೀನರ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
9 然而,义人要持守所行的道; 手洁的人要力上加力。
ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.
10 至于你们众人,可以再来辩论吧! 你们中间,我找不着一个智慧人。
“ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ.
11 我的日子已经过了; 我的谋算、我心所想望的已经断绝。
ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.
ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ; ಕತ್ತಲಿಂದ ಬೆಳಕು ಬೇಗ ಬರಲಿದೆ ಎನ್ನುತ್ತಾರೆ.
13 我若盼望阴间为我的房屋, 若下榻在黑暗中, (Sheol )
ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ, (Sheol )
14 若对朽坏说:你是我的父; 对虫说:你是我的母亲姊妹;
ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ,
15 这样,我的指望在哪里呢? 我所指望的谁能看见呢?
ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
16 等到安息在尘土中, 这指望必下到阴间的门闩那里了。 (Sheol )
ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?” (Sheol )