< 约书亚记 13 >
1 约书亚年纪老迈,耶和华对他说:“你年纪老迈了,还有许多未得之地,
೧ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
೨ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ
3 从埃及前的西曷河往北,直到以革伦的境界,就算属迦南人之地。有非利士人五个首领所管的迦萨人、亚实突人、亚实基伦人、迦特人、以革伦人之地,并有南方亚卫人之地。
೩ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,
4 又有迦南人的全地,并属西顿人的米亚拉到亚弗,直到亚摩利人的境界。
೪ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು
5 还有迦巴勒人之地,并向日出的全黎巴嫩,就是从黑门山根的巴力·迦得,直到哈马口。
೫ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;
6 山地的一切居民,从黎巴嫩直到米斯利弗·玛音,就是所有的西顿人,我必在以色列人面前赶出他们去。你只管照我所吩咐的,将这地拈阄分给以色列人为业。
೬ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ
7 现在你要把这地分给九个支派和玛拿西半个支派为业。”
೭ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.
8 玛拿西那半支派和吕便、迦得二支派已经受了产业,就是耶和华的仆人摩西在约旦河东所赐给他们的:
೮ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
9 是从亚嫩谷边的亚罗珥和谷中的城,并米底巴的全平原,直到底本,
೯ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
10 和在希实本作王亚摩利王西宏的诸城,直到亚扪人的境界;
೧೦ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ
11 又有基列地、基述人、玛迦人的地界,并黑门全山、巴珊全地,直到撒迦;
೧೧ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,
12 又有巴珊王噩的全国—他在亚斯他录和以得来作王(利乏音人所存留的只剩下他)。这些地的人都是摩西所击杀、所赶逐的。
೧೨ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
13 以色列人却没有赶逐基述人、玛迦人;这些人仍住在以色列中,直到今日。
೧೩ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.
14 只是利未支派,摩西没有把产业分给他们。他们的产业乃是献与耶和华—以色列 神的火祭,正如耶和华所应许他们的。
೧೪ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.
೧೫ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
16 他们的境界是亚嫩谷边的亚罗珥和谷中的城,靠近米底巴的全平原;
೧೬ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;
17 希实本并属希实本平原的各城,底本、巴末·巴力、伯·巴力·勉、
೧೭ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,
೧೮ಯಹಚಾ ಕೆದೇಮೋತ್, ಮೇಫಾಯತ್,
೧೯ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,
೨೦ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ,
21 平原的各城,并亚摩利王西宏的全国。这西宏曾在希实本作王,摩西把他和米甸的族长以未、利金、苏珥、户珥、利巴击杀了;这都是住那地属西宏为首领的。
೨೧ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
22 那时以色列人在所杀的人中,也用刀杀了比珥的儿子术士巴兰。
೨೨ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.
23 吕便人的境界就是约旦河与靠近约旦河的地。以上是吕便人按着宗族所得为业的诸城,并属城的村庄。
೨೩ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.
೨೪ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
25 他们的境界是雅谢和基列的各城,并亚扪人的一半地,直到拉巴前的亚罗珥;
೨೫ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,
26 从希实本到拉抹·米斯巴和比多宁,又从玛哈念到底璧的境界,
೨೬ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,
27 并谷中的伯·亚兰、伯·宁拉、疏割、撒分,就是希实本王西宏国中的余地,以及约旦河与靠近约旦河的地,直到基尼烈海的极边,都在约旦河东。
೨೭ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
28 以上是迦得人按着宗族所得为业的诸城,并属城的村庄。
೨೮ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.
29 摩西把产业分给玛拿西半支派,是按着玛拿西半支派的宗族所分的。
೨೯ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
30 他们的境界是从玛哈念起,包括巴珊全地,就是巴珊王噩的全国,并在巴珊、睚珥的一切城邑,共六十个。
೩೦ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.
31 基列的一半,并亚斯他录、以得来,就是属巴珊王噩国的二城,是按着宗族给玛拿西的儿子玛吉的一半子孙。
೩೧ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.
32 以上是摩西在约旦河东对着耶利哥的摩押平原所分给他们的产业。
೩೨ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.
33 只是利未支派,摩西没有把产业分给他们。耶和华—以色列的 神是他们的产业,正如耶和华所应许他们的。
೩೩ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.