< 约书亚记 21 >
1 那时,利未人的众族长来到祭司以利亚撒和嫩的儿子约书亚,并以色列各支派的族长面前,
೧ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,
2 在迦南地的示罗对他们说:“从前耶和华借着摩西吩咐给我们城邑居住,并城邑的郊野可以牧养我们的牲畜。”
೨“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು
3 于是以色列人照耶和华所吩咐的,从自己的地业中,将以下所记的城邑和城邑的郊野给了利未人。
೩ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
4 为哥辖族拈阄:利未人的祭司、亚伦的子孙,从犹大支派、西缅支派、便雅悯支派的地业中,按阄得了十三座城。
೪ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.
5 哥辖其余的子孙,从以法莲支派、但支派、玛拿西半支派的地业中,按阄得了十座城。
೫ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
6 革顺的子孙,从以萨迦支派、亚设支派、拿弗他利支派、住巴珊的玛拿西半支派的地业中,按阄得了十三座城。
೬ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
7 米拉利的子孙,按着宗族,从吕便支派、迦得支派、西布伦支派的地业中,按阄得了十二座城。
೭ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು
8 以色列人照着耶和华借摩西所吩咐的,将这些城邑和城邑的郊野,按阄分给利未人。
೮ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
9 从犹大支派、西缅支派的地业中,将以下所记的城给了利未支派哥辖宗族亚伦的子孙;因为给他们拈出头一阄,
೯ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.
೧೦ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.
11 将犹大山地的基列·亚巴和四围的郊野给了他们。亚巴是亚衲族的始祖。(基列·亚巴就是希伯 )。
೧೧ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.
12 惟将属城的田地和村庄给了耶孚尼的儿子迦勒为业。
೧೨ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
13 以色列人将希伯 ,就是误杀人的逃城和属城的郊野,给了祭司亚伦的子孙;又给他们立拿和属城的郊野,
೧೩ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,
16 亚因和属城的郊野,淤他和属城的郊野,伯·示麦和属城的郊野,共九座城,都是从这二支派中分出来的。
೧೬ಅಯಿನ್, ಯುಟ್ಟಾ, ಬೇತ್‌ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು
17 又从便雅悯支派的地业中给了他们基遍和属城的郊野,迦巴和属城的郊野,
೧೭ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,
18 亚拿突和属城的郊野,亚勒们和属城的郊野,共四座城。
೧೮ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.
19 亚伦子孙作祭司的共有十三座城,还有属城的郊野。
೧೯ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
20 利未支派中哥辖的宗族,就是哥辖其余的子孙,拈阄所得的城有从以法莲支派中分出来的。
೨೦ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ
21 以色列人将以法莲山地的示剑,就是误杀人的逃城和属城的郊野,给了他们;又给他们基色和属城的郊野,
೨೧ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,
22 基伯先和属城的郊野,伯·和 和属城的郊野,共四座城;
೨೨ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
23 又从但支派的地业中给了他们伊利提基和属城的郊野,基比顿和属城的郊野,
೨೩ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,
24 亚雅 和属城的郊野,迦特·临门和属城的郊野,共四座城;
೨೪ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
25 又从玛拿西半支派的地业中给了他们他纳和属城的郊野,迦特·临门和属城的郊野,共两座城。
೨೫ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.
೨೬ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
27 以色列人又从玛拿西半支派的地业中将巴珊的哥兰,就是误杀人的逃城和属城的郊野,给了利未支派革顺的子孙;又给他们比·施提拉和属城的郊野,共两座城;
೨೭ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
28 又从以萨迦支派的地业中给了他们基善和属城的郊野,大比拉和属城的郊野,
೨೮ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
29 耶末和属城的郊野,隐·干宁和属城的郊野,共四座城;
೨೯ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
30 又从亚设支派的地业中给了他们米沙勒和属城的郊野,押顿和属城的郊野,
೩೦ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
31 黑甲和属城的郊野,利合和属城的郊野,共四座城;
೩೧ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
32 又从拿弗他利支派的地业中将加利利的基低斯,就是误杀人的逃城和属城的郊野,给了他们;又给他们哈末·多珥和属城的郊野,加珥坦和属城的郊野,共三座城。
೩೨ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
33 革顺人按着宗族所得的城,共十三座,还有属城的郊野。
೩೩ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
34 其余利未支派米拉利子孙,从西布伦支派的地业中所得的,就是约念和属城的郊野,加珥他和属城的郊野,
೩೪ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,
35 丁拿和属城的郊野,拿哈拉和属城的郊野,共四座城;
೩೫ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.
36 又从吕便支派的地业中给了他们比悉和属城的郊野,雅杂和属城的郊野,
೩೬ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,
37 基底莫和属城的郊野,米法押和属城的郊野,共四座城;
೩೭ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;
38 又从迦得支派的地业中,将基列的拉末,就是误杀人的逃城和属城的郊野,给了他们;又给他们玛哈念和属城的郊野,
೩೮ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
39 希实本和属城的郊野,雅谢和属城的郊野,共四座城。
೩೯ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.
40 其余利未支派的人,就是米拉利的子孙,按着宗族拈阄所得的,共十二座城。
೪೦ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.
41 利未人在以色列人的地业中所得的城,共四十八座,并有属城的郊野。
೪೧ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.
೪೨ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.
43 这样,耶和华将从前向他们列祖起誓所应许的全地赐给以色列人,他们就得了为业,住在其中。
೪೩ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
44 耶和华照着向他们列祖起誓所应许的一切话,使他们四境平安;他们一切仇敌中,没有一人在他们面前站立得住。耶和华把一切仇敌都交在他们手中。
೪೪ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.
45 耶和华应许赐福给以色列家的话一句也没有落空,都应验了。
೪೫ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.