< 士师记 12 >

1 以法莲人聚集,到了北方,对耶弗他说:“你去与亚扪人争战,为什么没有招我们同去呢?我们必用火烧你和你的房屋。”
ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು.
2 耶弗他对他们说:“我和我的民与亚扪人大大争战;我招你们来,你们竟没有来救我脱离他们的手。
ಯೆಫ್ತಾಹನು ಅವರಿಗೆ, “ನನಗೂ, ನಮ್ಮ ಜನರಿಗೂ ಅಮ್ಮೋನಿಯರ ಸಂಗಡ ದೊಡ್ಡ ವ್ಯಾಜ್ಯವಿರುವಾಗ, ನಾನು ನಿಮ್ಮನ್ನು ಕರೆದೆನು. ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
3 我见你们不来救我,我就拚命前去攻击亚扪人,耶和华将他们交在我手中。你们今日为什么上我这里来攻打我呢?”
ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.
4 于是耶弗他招聚基列人,与以法莲人争战。基列人击杀以法莲人,是因他们说:“你们基列人在以法莲、玛拿西中间,不过是以法莲逃亡的人。”
ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು.
5 基列人把守约旦河的渡口,不容以法莲人过去。以法莲逃走的人若说:“容我过去。”基列人就问他说:“你是以法莲人不是?”他若说:“不是”,
ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.
6 就对他说:“你说‘示播列’。”以法莲人因为咬不真字音,便说“西播列”。基列人就将他拿住,杀在约旦河的渡口。那时以法莲人被杀的有四万二千人。
ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.
7 耶弗他作以色列的士师六年。基列人耶弗他死了,葬在基列的一座城里。
ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.
8 耶弗他以后,有伯利恒人以比赞作以色列的士师。
ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
9 他有三十个儿子,三十个女儿;女儿都嫁出去了。他给众子从外乡娶了三十个媳妇。他作以色列的士师七年。
ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು.
10 以比赞死了,葬在伯利恒。
ನಂತರ ಇಬ್ಚಾನನು ಮರಣಹೊಂದಿ ಬೇತ್ಲೆಹೇಮಿನಲ್ಲಿ ಸಮಾಧಿಯಾದನು.
11 以比赞之后,有西布伦人以伦,作以色列的士师十年。
ಅವನ ತರುವಾಯ ಜೆಬುಲೂನಿನವನಾದ ಏಲೋನನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಅವನು ಹತ್ತು ವರ್ಷಗಳು ಇಸ್ರಾಯೇಲಿಗೆ ನ್ಯಾಯತೀರಿಸಿದನು.
12 西布伦人以伦死了,葬在西布伦地的亚雅 。
ಜೆಬುಲೂನಿನವನಾದ ಏಲೋನನು ಮರಣಹೊಂದಿ, ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.
13 以伦之后,有比拉顿人希列的儿子押顿作以色列的士师。
ಅವನ ತರುವಾಯ ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
14 他有四十个儿子,三十个孙子,骑着七十匹驴驹。押顿作以色列的士师八年。
ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.
15 比拉顿人希列的儿子押顿死了,葬在以法莲地的比拉顿,在亚玛力人的山地。
ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿ, ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.

< 士师记 12 >