< 耶利米哀歌 5 >
1 耶和华啊,求你记念我们所遭遇的事, 观看我们所受的凌辱。
೧ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.
2 我们的产业归与外邦人; 我们的房屋归与外路人。
೨ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.
೩ನಾವು ತಂದೆಯಿಲ್ಲದ ಅನಾಥರು, ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.
೪ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.
5 追赶我们的,到了我们的颈项上; 我们疲乏不得歇息。
೫ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.
೬ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.
7 我们列祖犯罪,而今不在了; 我们担当他们的罪孽。
೭ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.
೮ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.
೯ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.
೧೦ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
11 敌人在锡安玷污妇人, 在犹大的城邑玷污处女。
೧೧ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.
೧೨ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.
೧೩ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.
೧೪ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.
೧೫ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.
16 冠冕从我们的头上落下; 我们犯罪了,我们有祸了!
೧೬ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!
೧೭ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.
೧೮ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.
೧೯ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.
೨೦ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ? ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?
21 耶和华啊,求你使我们向你回转, 我们便得回转。 求你复新我们的日子,像古时一样。
೨೧ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
೨೨ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;