< 玛拉基书 4 >
1 万军之耶和华说:“那日临近,势如烧着的火炉,凡狂傲的和行恶的必如碎秸,在那日必被烧尽,根本枝条一无存留。
೧“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
2 但向你们敬畏我名的人必有公义的日头出现,其光线有医治之能。你们必出来跳跃如圈里的肥犊。
೨ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
3 你们必践踏恶人;在我所定的日子,他们必如灰尘在你们脚掌之下。这是万军之耶和华说的。
೩ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
4 “你们当记念我仆人摩西的律法,就是我在何烈山为以色列众人所吩咐他的律例典章。
೪“ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.
5 “看哪,耶和华大而可畏之日未到以前,我必差遣先知以利亚到你们那里去。
೫ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;
6 他必使父亲的心转向儿女,儿女的心转向父亲,免得我来咒诅遍地。”
೬ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”